ಬ್ರೇಕಿಂಗ್ ನ್ಯೂಸ್
27-06-21 01:49 pm Sandesh, Mysore ಕರ್ನಾಟಕ
ಚಾಮರಾಜನಗರ, ಜೂನ್ 27: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ ವೇಳೆ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಲ್ಲ. ಅದು ಸರ್ಕಾರವೇ ಮಾಡಿದ ಕಗ್ಗೊಲೆಯಾಗಿದೆ. 36 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ಸಂತ್ರಸ್ತರನ್ನು ಕಂಡು ಸಾಂತ್ವನ ಹೇಳಿದ ಡಿಕೆ ಶಿವಕುಮಾರ್, ಆಕ್ಸಿಜನ್ ದುರಂತದಲ್ಲಿ 36 ಜನ ಸಾವು ಪ್ರಕರಣಕ್ಕೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವೇ ನೇರ ಹೊಣೆ. ಈ ಘಟನೆ ಬಗ್ಗೆ ಸರಕಾರ ಎಷ್ಟು ನಿರ್ಲಕ್ಷ್ಯ ವಹಿಸಿದೆ ಅಂದ್ರೆ, ದುರ್ಘಟನೆಗೆ ಕಾರಣರಾದ ಅಧಿಕಾರಿಗಳ ಮೇಲೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ದುರಂತ ಸಂಭವಿಸಿದ್ದರಿಂದ ಸ್ವತಃ ಮುಖ್ಯಮಂತ್ರಿ ಅವರೇ ಭೇಟಿ ನೀಡಬೇಕಿತ್ತು. ಆದರೆ ಅವರಿಗೇ ಭಯ ಆವರಿಸಿದೆ, ಜನರು ಆಕ್ರೋಶಗೊಂಡಿದ್ದಾರೆ, ರೊಚ್ಚಿಗೆದ್ದು ಹೊಡೆಯುತ್ತಾರೆ ಎಂದು ಅವರಿಗೆ ಗುಪ್ತಚರ ಇಲಾಖೆ ಮಾಹಿತಿ ಇತ್ತು. ಹೀಗಾಗಿ ಮುಖ್ಯಮಂತ್ರಿ ಇಲ್ಲಿಗೆ ಭೇಟಿಯನ್ನೇ ನೀಡಿಲ್ಲ ಎಂದರು.
ಅಷ್ಟೇ ಅಲ್ಲ, ದುರಂತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ರಾಜ್ಯ ಸರ್ಕಾರದ ಯಾವುದೇ ಸಚಿವನೂ, ಭೇಟಿ ನೀಡಿಲ್ಲ. ಅವರೆಲ್ಲಾ ಬೆಂಗಳೂರಿನಲ್ಲಿ ತಮಗೆ ಆ ಜವಾಬ್ದಾರಿ ಬೇಕು, ಈ ಜವಾಬ್ದಾರಿ ಬೇಕು ಎಂದು ಕುಳಿತಿದ್ದಾರೆ. ಎಲ್ಲರಿಗೂ ಪಾಲು ಬೇಕು, ಅಷ್ಟೇ. ಜನರ ಸ್ಥಿತಿ ದುರ್ಗತಿಯಾದರೆ ನೋಡಲು ಬರಲ್ಲ. ಕೋವಿಡ್ ಆಸ್ಪತ್ರೆಯಲ್ಲಿ ದುರಂತ ನಡೆದರೆ ಅದರ ಜವಾಬ್ದಾರಿ ವಹಿಸಿಕೊಳ್ಳಲು ಯಾರಿಗೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರಿಗೆ ಸಿಎಂ ಕುರ್ಚಿಯೇ ಇಂಪಾರ್ಟೆಂಟ್ ಆಗಿದೆ, ಆಕ್ಸಿಜನ್ ದುರಂತದಲ್ಲಿ ಮುಖ್ಯಮಂತ್ರಿಗಳ ತಲೆ ದಂಡವೇ ಆಗಬೇಕಿತ್ತು. ಆದರೆ ಜನರ ತಲೆದಂಡ ಆಗಿದೆ ಎಂದು ಹೇಳಿದ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಪ್ರಕರಣ ದಾಖಲಿಸಿಕೊಂಡು ಮೃತ 24 ಕುಟುಂಬಳಿಗೆ ತಾತ್ಕಾಲಿಕವಾಗಿ 2 ಲಕ್ಷ ರೂಪಾಯಿಗಳನ್ನು ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸಿದೆ. ಆದರೆ ಸ್ವತಃ ಸರಕಾರದಿಂದ ಯಾವುದೇ ಸಾಂತ್ವನ, ಪರಿಹಾರ ನೀಡಿಲ್ಲ. ಕೆಪಿಸಿಸಿ ವತಿಯದ ನಾವು 1 ಲಕ್ಷ ರೂಪಾಯಿಗಳನ್ನು ಪ್ರತಿ ಮೃತ ವ್ಯಕ್ತಿಗಳ ಕುಟುಂಬಕ್ಕೂ ನೀಡುತ್ತಿದ್ದೇವೆ ಎಂದರು.
ಆಂಧ್ರಪ್ರದೇಶದ ತಿರುಪತಿ ಬಳಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಲ್ಲಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ 10 ಲಕ್ಷ ರೂಪಾಯಿಗಳ ಪರಿಹಾರ ನೀಡಿದ್ದಾರೆ. ಆದರೆ ಕರ್ನಾಟಕ ಪರಿಹಾರ ನೀಡಲು ಕೋರ್ಟ್ ತಪರಾಕಿ ಬೇಕಾಯಿತು. ಅದೂ ಕೂಡ ಕೇವಲ ಎರಡು ಲಕ್ಷ ರೂಪಾಯಿ ನೀಡಿದ್ದೀರಿ ಎಂದು ದೂರಿದ ಶಿವಕುಮಾರ್, ಕುಟುಂಬಗಳಿಗೆ ಸಾಂತ್ವನ ಹೇಳಲು ಆರೋಗ್ಯ ಸಚಿವ ಬರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನೂ ಬರಲಿಲ್ಲ. ನಾವು ಇವತ್ತಿನವರೆಗೂ ಕಾದು ನೋಡಿದೆವು. ಯಾರೂ ಬರಲಿಲ್ಲ ಎಂದು ನಾವು ಸಾಂತ್ವನ ಹೇಳಿ ಧೈರ್ಯ ತುಂಬಲು ಬಂದಿದ್ದೇವೆ ಎಂದರು.
Oxygen Shortage in Chamarajanagar, KPCC president D. K. Shivakumar slams BJP government as liable for the 24 deaths.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm