ಬ್ರೇಕಿಂಗ್ ನ್ಯೂಸ್
01-07-21 03:44 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಬಳಿ ರೂ. 12.5 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪದ ಕುರಿತು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಖಾಸಗಿ ದೂರು ಮುಖ್ಯಮಂತ್ರಿ ಕುಟುಂಬಕ್ಕೆ ಮತ್ತೆ ಕಂಟಕವಾಗಿ ಪರಿಣಮಿಸಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ ಒಂಬತ್ತು ಮಂದಿಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರಿನ ತನಿಖೆಯ ಬಗ್ಗೆ ಕೋರ್ಟ್ ಜುಲೈ 8ಕ್ಕೆ ನಿರ್ಧಾರ ಪ್ರಕಟಿಸಲಿದ್ದು ಎಸಿಬಿ ತನಿಖೆಯಾಗುತ್ತಾ ಲೋಕಾಯುಕ್ತಕ್ಕೆ ಹೋಗುತ್ತಾ ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಡಾ.ಜಿ.ಸಿ. ಪ್ರಕಾಶ್, 37 ಕ್ರೆಸೆಂಟ್ ಹೋಟೆಲ್ ಮಾಲೀಕ ಕೆ. ರವಿ ಮತ್ತು ಯಡಿಯೂರಪ್ಪ ಅವರ ಇನ್ನೊಬ್ಬ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
ಜೂನ್ 2ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ಅಬ್ರಹಾಂ, ಯಡಿಯೂರಪ್ಪ ಮತ್ತು ಇತರ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಆದೇಶಿಸಲು ಮನವಿ ಮಾಡಿದ್ದರು.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಜಯಂತ್ ಕುಮಾರ್, ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಾದ ಮಂಡಿಸಿದ ಅಬ್ರಹಾಂ, ಪ್ರಕರಣವನ್ನು ಎಸಿಬಿ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ. ರಾಜೇಶ್ವರಿ ಮತ್ತು ಎಸಿಬಿ ಡಿವೈಎಸ್‌ಪಿ ರಾಜೇಂದ್ರ ಕೂಡ ವಿಚಾರಣೆ ವೇಳೆ ಹಾಜರಿದ್ದರು. ವಾದ ಆಲಿಸಿದ ನ್ಯಾಯಾಧೀಶರು, ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೇ ಎನ್ನುವ ಬಗ್ಗೆ ಜುಲೈ 8ಕ್ಕೆ ಆದೇಶ ನೀಡುವುದಾಗಿ ತಿಳಿಸಿದ್ದಾರೆ.
ಬಿಡಿಎ ಕಾಮಗಾರಿಯಲ್ಲಿ ಕಿಕ್ ಬ್ಯಾಕ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೋನದಾಸನಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯಗಳ ನಿರ್ಮಾಣಕ್ಕೆ ₹567 ಕೋಟಿ ಮೊತ್ತದ ಕಾಮಗಾರಿಗೆ 2017ರಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿತ್ತು. ಆಗ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿಗೆ ₹666.22 ಕೋಟಿ ಮೊತ್ತಕ್ಕೆ ಟೆಂಡರ್ ಅಂತಿಮ ಮಾಡಲಾಗಿತ್ತು. ಆದರೆ, ಬಿಡಿಎ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಾರಣಕ್ಕೆ ಕಾಮಗಾರಿ ಆರಂಭವಾಗಿರಲಿಲ್ಲ ಎಂಬ ಉಲ್ಲೇಖ ದೂರಿನಲ್ಲಿದೆ.
‘ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬಿಡಿಎ ಅಧ್ಯಕ್ಷರಾಗಿದ್ದ ಎಸ್.ಟಿ. ಸೋಮಶೇಖರ್ ಸರ್ಕಾರ ಪತನಗೊಳ್ಳುವ ಹಂತದಲ್ಲಿ ಪ್ರಭಾವ ಬೀರಿ ರಾಮಲಿಂಗಂ ಕಂಪನಿಗೆ ಕಾರ್ಯಾದೇಶ ಕೊಡಿಸಲು ಯತ್ನಿಸಿದ್ದರು. ಈ ಕುರಿತು ಆಗಿನ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ನಂತರದ ದಿನಗಳಲ್ಲಿ ಬಿಡಿಎ ಆಯುಕ್ತರ ವಿರೋಧದ ಮಧ್ಯೆಯೂ ಕಾರ್ಯಾದೇಶ ನೀಡಲಾಗಿತ್ತು’ ಎಂದು ದೂರಿನಲ್ಲಿ ಅಬ್ರಹಾಂ ಆರೋಪಿಸಿದ್ದಾರೆ.
ಸಿಎಂ ಮತ್ತು ಮಗನ ಹೆಸರಲ್ಲಿ ಹಣ ಪಡೆದಿದ್ದ ಅಧಿಕಾರಿ ?
ಆನಂತರ ಬಿಡಿಎ ಆಯುಕ್ತರಾಗಿದ್ದ ಜಿ.ಸಿ. ಪ್ರಕಾಶ್, ಮುಖ್ಯಮಂತ್ರಿ ಮತ್ತು ಅವರ ಮಗನ ಪರವಾಗಿ ಚಂದ್ರಕಾಂತ್ ಬಳಿ ರೂ. 12 ಕೋಟಿ ಲಂಚ ಪಡೆದಿದ್ದರು. ಗುತ್ತಿಗೆದಾರ ಈ ಹಣವನ್ನು ಕ್ರೆಸೆಂಟ್ ಹೋಟೆಲ್ ಮಾಲೀಕರಿಗೆ ನೀಡಿದ್ದರು. ಅವರಿಂದ ರೂ. 12 ಕೋಟಿ ಪಡೆದುಕೊಂಡಿದ್ದ ಪ್ರಕಾಶ್, ಮುಖ್ಯಮಂತ್ರಿ ಮತ್ತು ಅವರ ಮಗನಿಗೆ ತಲುಪಿಸದೇ ವಂಚಿಸಿದ್ದರು. ಬಳಿಕ ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ಎತ್ತಂಗಡಿ ಮಾಡಲಾಗಿತ್ತು ಎಂಬ ಆರೋಪವೂ ದೂರಿನಲ್ಲಿದೆ.
ಬಳಿಕ ಮತ್ತೆ ಚಂದ್ರಕಾಂತ್ ರಾಮಲಿಂಗಂ ಮುಂದೆ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಬಿಡಿಎ ಸೇರಿದಂತೆ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಅವರು, ಅವುಗಳ ವಿಚಾರದಲ್ಲಿ ಪ್ರಭಾವ ಬೀರುವುದಕ್ಕಾಗಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿಗೆ ರೂ. 12.5 ಕೋಟಿ ಪಾವತಿಸಿದ್ದಾರೆ. 2019ರ ಅಕ್ಟೋಬರ್ 14ರಿಂದ 2020ರ ಆಗಸ್ಟ್ 17ರ ನಡುವೆ ಏಳು ಸಂಶಯಾಸ್ಪದ ಕಂಪನಿಗಳ ಮೂಲಕ ಹಣ ವರ್ಗಾವಣೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
2020ರ ಸೆಪ್ಟೆಂಬರ್‌ನಲ್ಲಿ ಅಬ್ರಹಾಂ, ಇದೇ ದೂರನ್ನು ಎಸಿಬಿಗೆ ಸಲ್ಲಿಸಿದ್ದರು. ಆದರೆ ಸೆಪ್ಟೆಂಬರ್ 25ರಂದು ಎಸಿಬಿ ಈ ದೂರನ್ನು ವಿಚಾರಣೆ ನಡೆಸದೆ ತಿರಸ್ಕರಿಸಿತ್ತು. ಬಳಿಕ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಎಸ್.ಟಿ. ಸೋಮಶೇಖರ್ ವಿರುದ್ಧ ಖಾಸಗಿ ದೂರು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
Will a Private complaint in court for graft probe against Yediyurappa be trouble. A PRIVATE complaint was filed in a Bengaluru court for a probe into allegations of bribery and money laundering against Karnataka Chief Minister B S Yediyurappa, a minister and an official in the government, and four members of the CM’s family over transactions that took place in 2020 for giving clearances to a housing project.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm