ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.
ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm