ಬ್ರೇಕಿಂಗ್ ನ್ಯೂಸ್
03-07-21 12:22 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೂ ಸಿಡಿ ಭೀತಿ ಶುರುವಾಗಿದ್ಯಾ ಎನ್ನುವ ಅನುಮಾನ ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ದ ತಡೆ ಹೇರಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಸದಾನಂದ ಗೌಡ ನಿರ್ಬಂಧ ಆದೇಶ ಪಡೆದುಕೊಂಡಿದ್ದಾರೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲವು ಪತ್ರಿಕೆ, ಚಾನಲ್ಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಯಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಹಳೆಯ ಉದಾಹರಣೆಗಳನ್ನೂ ನೀಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇಂಥ ವಿಡಿಯೋ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯೂ ಆಗಲಿದೆ. ಆದ್ದರಿಂದ ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದೆ. ಅದಕ್ಕಾಗಿ ಮೊದಲೇ ನಿರ್ಬಂಧ ಹೇರಲು ಮನವಿ ಮಾಡುತ್ತಿದ್ದೇನೆ ಎಂದು ಕೋರ್ಟಿನಲ್ಲಿ ಮನವಿ ಮಾಡಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.
ಇದೇ ವೇಳೆ, ತನ್ನ ನಡೆಯನ್ನು ಟ್ವೀಟ್ ಮೂಲಕ ಸಮರ್ಥಿಸಿಕೊಂಡಿರುವ ಸದಾನಂದ ಗೌಡ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಹಿಂದೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ಗೌರವಿಸುತ್ತೇನೆ. ಹಾಗೆಂದು ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸಾರ ಮಾಡಬಾರದೆಂದು ನಿರ್ಬಂಧ ಆದೇಶ ತಂದಿದ್ದೇನೆ. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ಹೇಳಿದ್ದಾರೆ.
ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
— Sadananda Gowda (@DVSadanandGowda) July 2, 2021
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು
Fear grips Minister DV Sadananda Gowda of Fake CD approaches court over an injunction against Media so that no one aires the fake CD video on television.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm