ಬ್ರೇಕಿಂಗ್ ನ್ಯೂಸ್
03-07-21 12:47 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3: ತನ್ನ ವಿರುದ್ಧ ತೇಜೋವಧೆ ಮಾಡುವಂತಹ ಕಾರ್ಯಕ್ರಮ ಪ್ರಸಾರ ಮಾಡಿದ ಕನ್ನಡದ ಸುದ್ದಿವಾಹಿನಿ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಆ ವಾಹಿನಿಗೆ ಬಹಿರಂಗ ಸವಾಲನ್ನೂ ಎಸೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಿಮ್ಮ ಬಳಿ ಇರುವ ಅಸ್ತ್ರ ’ಟಿಆರ್ ಪಿ’ ಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ. ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನರ ಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ ಎಂದು ಗುಡುಗಿದ್ದಾರೆ.
ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡಾ 90 ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇರುವರು. ಬಿಟ್ಟು ಹೋದವರು ನನ್ನಿಂದ ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ. ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಪರೇಟರ್ ನಿಂದ ಹಿಡಿದು ಟೆಕ್ನೀಷಿಯನ್ ಡೈರೆಕ್ಟರ್ ಹಾಗೂ ಪ್ರತಿಯೊಬ್ಬ ಪ್ರೊಡ್ಯೂಸರ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲಿಯೂ ಮಾತಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಹಾಗಂತ ನಿಜ ಸುಳ್ಳಾಗಲ್ಲ. ಖಾಸಗಿ ವಾಹಿನಿಯವರು ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿ ಹಲವಾರು ಕಾರ್ಯಕ್ರಮ ಮಾಡಿದ್ದಾರೆ. ನಾನು ಈ ಎಲ್ಲ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷಿಸುತ್ತ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸವೇ ಉತ್ತರ ಕೊಡುತ್ತದೆ ಎನ್ನುವ ನಂಬಿಕೆ ಇತ್ತು.
ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು ಮಾಧ್ಯಮದ ನೈತಿಕ ಜವಾಬ್ದಾರಿಯನ್ನು ಮರೆತು ವೈಯಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೀಳು ಮಟ್ಟದ ಕೆಲಸಕ್ಕೆ ಇಳಿದಿದ್ದಾರೆ.
ಈ ಬಾರಿ ಇದನ್ನು ನಿರ್ಲಕ್ಷಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇದಕ್ಕೆ ಉತ್ತರ ಕೊಡುತ್ತೇನೆ. ಆದರೆ, 10 ದಿನಗಳ ಬಳಿಕ. ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು ನನ್ನ ಕೆಲಸದ ಕುರಿತು ಯಾವ ಯಾವ ಸತ್ಯ ಹೊರ ಬರುತ್ತದೋ ಅದಕ್ಕೆ ಸಂಬಂಧಪಟ್ಟವರ ಬಾಯಿಯಿಂದಲೇ ಹೊರ ಬರಲಿ. ನಾನು ಕಾದು ನೋಡುತ್ತೇನೆ. ನನ್ನ ಉತ್ತರ ಜುಲೈ 11 ರಂದು. ಕಾದು ನೋಡಿ. ‘Truth is mighty And must prevail’. ನನ್ನ ಎಲ್ಲಾ ಏಳು ಬೀಳುಗಳಲ್ಲಿ ನನ್ನ ಜೊತೆಗಿದ್ದ ನನ್ನ ಆತ್ಮೀಯರಿಗೂ ಹಿತೈಷಿಗಳಿಗೂ ಅಭಿಮಾನಿಗಳ ಬಳಗಕ್ಕೂ ಚಿರಋಣಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.
ಪಬ್ಲಿಕ್ ಟಿವಿಯ ಸಿನಿ ಅಡ್ಡ ಕಾರ್ಯಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನ ಮಾಡುವ ರೀತಿ ಸುದ್ದಿ ಪ್ರಸಾರವಾಗಿದೆ ಎನ್ನಲಾಗುತ್ತಿದ್ದು ಇದರ ಬಗ್ಗೆ ಪಬ್ಲಿಕ್ ಟಿವಿಯ ಹೆಸರೆತ್ತದೆ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಕರಾವಳಿ ಮೂಲದ ಪ್ರತಿಭಾವಂತ ನಟನಾಗಿದ್ದು ಯಾರದೋ ಪಿತೂರಿಯಲ್ಲಿ ಅವಹೇಳನ ರೀತಿಯ ಸುದ್ದಿ ಪ್ರಸಾರವಾಗಿದೆ ಎನ್ನುವ ಆರೋಪಗಳಿವೆ. ಈ ಬಗ್ಗೆ ಸಿಡಿದು ನಿಂತಿರುವ ರಕ್ಷಿತ್ ಶೆಟ್ಟಿ ಜುಲೈ 11 ರಂದು ಇದಕ್ಕೆ ಉತ್ತರ ನೀಡುವುದಾಗಿ ಹೇಳಿದ್ದಾರೆ.
ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು news channel. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ… pic.twitter.com/wOpCvnE3Z9
— Rakshit Shetty (@rakshitshetty) July 1, 2021
Regional news channel Public Tv allegedly portrays Rakshit Shetty in a bad light for which the actor slams the channel on Twitter and also puts forth challenge.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm