ಬ್ರೇಕಿಂಗ್ ನ್ಯೂಸ್
03-07-21 04:57 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯನ್ನು ಮಂಗಳೂರು - ಬೆಂಗಳೂರು ನಡುವಿನ ರೈಲಿಗೆ ಜೋಡಿಸಲಾಗಿದ್ದು ಮುಂದಿನ ವಾರದಲ್ಲಿ ಸಂಚಾರಕ್ಕೆ ಲಭಿಸಲಿದೆ.
ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಜು.7ರಿಂದ ಸೇರ್ಪಡೆಗೊಳ್ಳಲಿದೆ. ಇದಕ್ಕಾಗಿ ಶನಿವಾರದಿಂದಲೇ (ಜು.3) ಬುಕಿಂಗ್ ಆರಂಭಿಸಲಾಗಿದೆ. ಈ ಬೋಗಿಯ ಪ್ರಯಾಣಕ್ಕೆ ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ.
ಪ್ರಕೃತಿ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟದ ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯ ಬದಲಿಗೆ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು- ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದ ವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.
ರೈಲು ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ವೇಳೆ ಅಲ್ಲಿನ ಘಟ್ಟಗಳ ಸೌಂದರ್ಯವನ್ನು ರೈಲಿನೊಳಗೆ ಕುಳಿತೇ ಸವಿಯುವ ಅವಕಾಶ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಬರುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲ ಆಗಿರುವುದರಿಂದ ಗಾಜಿನ ಬೋಗಿಯ ಪ್ರಯಾಣ ವಿಶೇಷ ಆಗುವುದರಲ್ಲಿ ಸಂಶಯವಿಲ್ಲ.
ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ - ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್‌ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್ ಬೋಗಿ ಸೇರ್ಪಡೆಯಾಗಲಿವೆ.
Rail passengers traveling between Bengaluru and Mangaluru during the day can now get a panoramic view of the picturesque ghats section as the train service will be inaugurated next week with bookings open.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm