ಬ್ರೇಕಿಂಗ್ ನ್ಯೂಸ್
06-07-21 12:09 pm Headline Karnataka News Network ಕರ್ನಾಟಕ
Photo credits : Tv9 kannada
ಶಿವಮೊಗ್ಗ, ಜುಲೈ 06; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ವಿಚಾರಕ್ಕೆ ನಡೆದ ಮಾತಿನ ಚಕಮಕಿ ಬಳಿಕ ಗಲಾಟೆ ನಡೆದಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಂಗ್ರೆಸ್‌ನ ಇಬ್ಬರು, ಬಿಜೆಪಿಯ ಮೂವರು ಮಾರಾಮಾರಿಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ. ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕೋವಿಡ್ ಲಸಿಕೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಈ ಗದ್ದಲ ಬಳಿಕ ಹೊಡೆದಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ ಮತ್ತು ನಮೃತ್ ಗಾಯಗೊಂಡಿದ್ದಾರೆ.
ಈ ಘಟನೆ ಬಳಿಕ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದಾಗ ಮತ್ತೆ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಕಾಂಗ್ರೆಸ್‌ನ ಸುಭಾಷ್ ಕುಲಾಲ್, ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತಗೆ ಗಾಯಗಳಾಗಿವೆ.
ಕಿಮ್ಮನೆ ಪ್ರತಿಭಟನೆ; ಈ ಘಟನೆ ಬಳಿಕ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ಬಿಜೆಪಿ ಮುಖಂಡ ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸಹ ಪ್ರತಿಭಟನೆ ನಡೆಸಿತು. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕೋವಿಡ್ ಸಮಯದಲ್ಲಿ ಬಡವರಿಗೆ ಸಹಕಾರಿಯಾಗಲು ಕಾಂಗ್ರೆಸ್ ತೀರ್ಥಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಈ ಕಾರ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿಯೇ ಮಾರಾಮಾರಿ ನಡೆದಿದೆ.
Thirthahalli Fight erupts between BJP and Congress members over Covid Vacinne many admitted to hospital. Also protest was held for the assault on BJP members by BJP party.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm