ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್‌ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.
ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm