ಬ್ರೇಕಿಂಗ್ ನ್ಯೂಸ್
06-07-21 03:23 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 06; ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗಿದೆ. ಥಾವರ್ ಚಂದ್ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.
ಹಲವು ರಾಜ್ಯಗಳಿಗೆ ಮಂಗಳವಾರ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕಕ್ಕೆ ಥಾವರ್ ಚಂದ್ ಗೆಹ್ಲೋಟ್ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಪರಿಚಯ;
73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯರು. ಪ್ರಸ್ತುತ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.
2014ರ ಸೆಪ್ಟೆಂಬರ್‌ನಿಂದ ಗುಜರಾತ್ ಮೂಲದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯಪಾಲರ ಅವಧಿ 5 ವರ್ಷಗಳು. ವಜುಭಾಯಿ ವಾಲಾ ಅವಧಿ ಪೂರ್ಣಗೊಂಡಿದ್ದರೂ ನೂತನ ರಾಜ್ಯಪಾಲರ ನೇಮಕವಾಗಿರಲಿಲ್ಲ.
ಕೇಂದ್ರ ಗೃಹ ಸಚಿವಾಲಯ ರಾಜ್ಯಪಾಲರನ್ನು ಆಯ್ಕೆ ಮಾಡಿ ಅಂತಿಮ ಒಪ್ಪಿಗೆಗಾಗಿ ರಾಷ್ಟ್ರಪತಿಗಳಿಗೆ ಕಳಿಸುತ್ತದೆ. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ನೇಮಕಾತಿ ಅಧಿಸೂಚನೆ ಪ್ರಕಟಿಸುವಾಗ ಮುಂದಿನ ಆದೇಶದ ತನಕ ಎಂಬ ಒಕ್ಕಣೆಯೊಂದಿಗೆ ಪ್ರಕಟಿಸಲಾಗುತ್ತದೆ. ಆದ್ದರಿಂದ ಅವಧಿ ಪೂರ್ಣಗೊಂಡರೂ ಮುಂದಿನ ಆದೇಶದ ತನಕ ರಾಜ್ಯಪಾಲರು ಮುಂದುವರೆಯಬಹುದಾಗಿದೆ.
ಕರ್ನಾಟಕದ ವಿವಿಧ ಸಚಿವರು, ಪ್ರತಿಪಕ್ಷದ ನಾಯಕರು ನೂತನ ರಾಜ್ಯಪಾಲರಾಗಿ ಆಯ್ಕೆಯಾದ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಗೆಹ್ಲೋಟ್ ಕರ್ನಾಟಕದ 35ನೇ ರಾಜ್ಯಪಾಲರು.
1948, ಮೇ 18ರಂದು ಥಾವರ್ ಚಂದ್ ಗೆಹ್ಲೋಟ್ ಮಧ್ಯಪ್ರದೇಶ ರಾಜ್ಯದ ನಾಗ್ಡಾ ಜಿಲ್ಲೆಯ ರುಪ್ಟಾ ಗ್ರಾಮದಲ್ಲಿ ಜನಿಸಿದರು. ದಲಿತ ಸಮುದಾಯಕ್ಕೆ ಸೇರಿದ ಇವರು ಪದವಿ ವ್ಯಾಸಂಗ ಮಾಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್, ಮೂವರು ಪುತ್ರರು. ಪುತ್ರಿ ಯೋಗಿತಾ ಸೋಲಂಕಿ ಕೆಲವು ದಿನಗಳ ಹಿಂದೆ ಕೋವಿಡ್‌ಗೆ ಬಲಿಯಾಗಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಆರ್‌ಎಸ್‌ಎಸ್ ಮೂಲಕ ರಾಜಕೀಯಕ್ಕೆ ಬಂದಿದ್ದಾರೆ. ನಾಗ್ಡಾ ಜಿಲ್ಲೆಯ ನಗರ ಕಾರ್ಯವಾಹಕ್ ಆಗಿದ್ದರು. ಭಾರತೀಯ ಮಜ್ದೂರ್ ಸಂಘದ ಖಜಾಂಚಿಯಾಗಿ, ಕಾರ್ಯದರ್ಶಿಯಾಗಿದ್ದರು.1968 ರಿಂದ 71ರ ಅವಧಿಯಲ್ಲಿ ಕಾರ್ಮಿಕ ಹೋರಾಟದಲ್ಲಿ ತೊಡಗಿದ್ದಾಗ ಹಲವು ಬಾರಿ ಪೊಲೀಸರು ವಶಕ್ಕೆ ಪಡೆದಿದ್ದರು. 10 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿಯೂ ಇದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಹ ಜೈಲುವಾಸ ಅನುಭವಿಸಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಪಕ್ಷ ಸಂಘಟನೆಯಲ್ಲಿಯೂ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. 2013ರಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎರಡು ಮೂರು ದಿನದಲ್ಲಿ ಅವರು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Union Minister for Social Justice and Empowerment Thawarchand Gehlot has been appointed as Governor of Karnataka. Along with Karnataka, seven other states got new Governors on Tuesday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm