ಬ್ರೇಕಿಂಗ್ ನ್ಯೂಸ್
11-07-21 01:23 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 11: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಷ್ಟ್ರಪತಿಗಳು ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್‌ರನ್ನು ರಾಜ್ಯಪಾಲರಾಗಿ ನೇಮಕ ಮಾಡಿದ್ದರು.
ಭಾನುವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಥಾವರ್ ಚಂದ್ ಗೆಹ್ಲೋಟ್‌ಗೆ ಆಡಳಿತ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Bengaluru | Thawarchand Gehlot takes oath as governor of Karnataka
— ANI (@ANI) July 11, 2021
Chief Justice of the Karnataka High Court, Justice Abhay Srinivas Oka, administers the oath of office and secrecy to Thawarchand Gehlot pic.twitter.com/jidS5LwT1s
ಬಿಜೆಪಿ ಹಿರಿಯ ನಾಯಕ ಥಾವರ್ ಚಂದ್ ಗೆಹ್ಲೋಟ್‌ರನ್ನು ಕರ್ನಾಟಕದ ರಾಜ್ಯಪಾಲರಾಗಿ ಜುಲೈ 6ರಂದು ನೇಮಕ ಮಾಡಲಾಗಿತ್ತು. 2014ರ ಸೆಪ್ಟೆಂಬರ್‌ನಿಂದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿದ್ದರು. ವಜುಭಾಯಿ ವಾಲಾರ 5 ವರ್ಷದ ಅವಧಿ ಪೂರ್ಣಗೊಂಡಿದ್ದರೂ ನೂತನ ರಾಜ್ಯಪಾಲರ ನೇಮಕವಾಗಿರಲಿಲ್ಲ.
ಮಧ್ಯಪ್ರದೇಶ ಮೂಲದ ಥಾವರ್ ಚಂದ್ ಗೆಹ್ಲೋಟ್ ರಾಜ್ಯಸಭಾ ಸದಸ್ಯರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.
ರಾಜ್ಯಪಾಲರಾಗಿ ಆಯ್ಕೆಯಾದ ಬಳಿಕ ರಾಜ್ಯಸಭಾ ಸದಸ್ಯತ್ವ ಮತ್ತು ಕೇಂದ್ರ ಸಚಿವ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ರಾಜೀನಾಮೆ ನೀಡಿದ್ದರು. ಭಾನುವಾರ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
Veteran BJP leader and former Union Minister Thaawarchand Gehlot on July 11, Sunday, took oath as the 19th Governor of Karnataka, succeeding Vajubhai Rudabhai Vala. The Chief Justice of the Karnataka High Court Justice Abhay Shreeniwas Oka administered the oath of office and secrecy to Gehlot at the Raj Bhavan in the presence of outgoing Governor Vala, Chief Minister BS Yediyurappa, his Cabinet colleagues, MPs, MLAs and senior officials of the state government.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm