ಬ್ರೇಕಿಂಗ್ ನ್ಯೂಸ್
12-07-21 02:20 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 12: ಕೋವಿಡ್ 19 ಸಾಂಕ್ರಾಮಿಕದ ನಡುವೆ ಎಸ್ಎಲ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಜಸ್ಟೀಸ್ ಬಿವಿ ನಾಗರತ್ನ ಹಾಗೂ ಜಸ್ಟೀಸ್ ಎಚ್ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ, ಸರ್ಕಾರ ಕೈಗೊಂಡ ಮಾರ್ಗಸೂಚಿಗಳು ಸಮರ್ಪಕವಾಗಿದೆ ಎಂದು ಪರಿಗಣಿಸಿದೆ, 2ನೇ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂಬ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಬಲವಂತವಾಗಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಅರ್ಥವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಕರ್ನಾಟಕ ಸರ್ಕಾರ ತಿಳಿಸಿದೆ.
ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್ 19 ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಹೆಚ್ಚಿಸಲು ಅಣಕು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
The Karnataka High Court has refused to interfere with the decision of the State Government to hold SSLC exams in physical form for students of Class X from July 19. A division bench comprising Justice BV Nagarathna and Justice Hanchate Sanjeev Kumar observed that the holding of exam was "in the interest of students" and that the state has taken adequate precautionary measures against the COVID-19 pandemic.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm