ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm