ಬ್ರೇಕಿಂಗ್ ನ್ಯೂಸ್
15-07-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಜುಲೈ 15: ಕೇರಳದಲ್ಲಿ ಮತ್ತೆ ಐದು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕೇರಳದಲ್ಲಿ ಇದುವರೆಗೆ ಒಟ್ಟು 28 ಪ್ರಕರಣಗಳು ಪತ್ತೆಯಾಗಿತ್ತು, ಇದೀಗ ಮತ್ತೆ ಐದು ಮಂದಿಯಲ್ಲಿ ಪ್ರಕರಣ ಕಾಣಿಸಿಕೊಂಡಿದೆ. ತಿರುವನಂತಪುರಂನಿಂದ 3 ಕಿ.ಮೀ ದೂರದಲ್ಲಿ ಈ ಪ್ರಕರಣಗಳು ಕಂಡುಬಂದಿವೆ.
ಈ ಐವರಲ್ಲಿ ನಾಲ್ವರು ಮಹಿಳೆಯರಾಗಿದ್ದಾರೆ, ಹೊಸ ಪ್ರಕರಣಗಳಲ್ಲಿ ಇಬ್ಬರು ಇಲ್ಲಿನ ಅನಾಯಾರಾ ಮೂಲದವರಾಗಿದ್ದು, ಇತರೆ ಸ್ಥಳಗಳಿಗೆ ಸೋಂಕುಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಬೇರೆ ಪ್ರಕರಣಗಳು ಕುನ್ನುಕುಳಿ, ಪಟ್ಟೊಮ್‌ನಲ್ಲಿ ಪತ್ತೆಯಾಗಿದೆ, ಮಾದರಿಗಳನ್ನು ಅಲಪ್ಪುಳದಲ್ಲಿರುವ ನ್ಯಾಷನಲ್ ವೈರಾಲಜಿ ಇನ್‌ಸ್ಟಿಟ್ಯೂಟ್‌ಗೆ ಕಳುಹಿಸಲಾಗಿತ್ತು. ಕೇರಳದಲ್ಲಿ ಝೀಕಾ ವೈರಸ್ ಹಾವಳಿ ಏರುತ್ತಿದ್ದಂತೆ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರಿಗೆ ಆದೇಶಿಸಲಾಗಿದೆ.
ಸದ್ಯ ಮಳೆಗಾಲ ಈ ವೈರಸ್ ಹರಡಲು ಈ ಸೊಳ್ಳೆಗೆ ಅನುಕೂಲವಾಗುತ್ತಿದೆ ಎಂದು ಆರೋಗ್ಯ ಇಲಾಖೆ ಕಮಿಷನರೇಟ್ ತಿಳಿಸಿದೆ. ಜ್ವರ, ಸಣ್ಣ ಸಣ್ಣ ಗುಳ್ಳೆಗಳು, ಕಣ್ಣಲ್ಲಿ ನೀರು ಸೋರುವುದು ಮತ್ತು ಸಂಧಿವಾತ ಝೀಕಾ ವೈರಸ್ ನ ಪ್ರಮುಖ ಲಕ್ಷಣಗಳಾಗಿವೆ.
ಝೀಕಾ ವೈರಸ್ ಕಾಯಿಲೆ ಸೊಳ್ಳೆಗಳ ಮೂಲಕ ವಾಹಕಗಳಾಗಿ ಹರಡುತ್ತದೆ. ಈ ಈಡಿಸ್ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಡೆಂಗ್ಯೂ, ಚಿಕನ್ ಗುನ್ಯಾ ಮತ್ತು ಹಳದಿ ಜ್ವರವನ್ನು ಹರಡುವ ಸೊಳ್ಳೆಯೂ ಸಹ ಈಡಿಸ್ ಈಜಿಪ್ಟಿ.
At a time when the Kerala government is scrambling to contain the spread of the Zika virus, five more people in the state have tested positive for the infection, taking the overall tally to nearly 30.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm