ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.
ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm