ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.
ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm