ಬ್ರೇಕಿಂಗ್ ನ್ಯೂಸ್
26-07-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ರಾಜಿನಾಮೆ ಪತ್ರ ನೀಡಿದ್ದಾರೆ. ತಮ್ಮ ಸ್ಥಾನಕ್ಕೆ ನೀಡಿರುವ ರಾಜಿನಾಮೆಯನ್ನು ರಾಜ್ಯಪಾಲರು ಸ್ವೀಕರಿಸಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಆಗೋವರೆಗೂ ನೀವೇ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ರಾಜಭವನದಿಂದ ಹೊರಗೆ ಬಂದು ಮಾತನಾಡಿದ ಯಡಿಯೂರಪ್ಪ, ನನಗೆ ಯಾವುದೇ ರೀತಿಯ ಒತ್ತಡ ಇರಲಿಲ್ಲ. ಎರಡು ವರ್ಷ ಕಾಲ ನನ್ನ ಮೇಲೆ ಅಭಿಮಾನ ಇಟ್ಟು ಅಧಿಕಾರ ನೀಡಿದ್ದಾರೆ. ಅದನ್ನು ನಿರ್ವಹಿಸಿದ್ದೇನೆ. ಈಗ ನಿರ್ಗಮಿಸಿದ್ದೇನೆ. ನನಗೆ ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ನಾನೇ ಸ್ವಯಂ ಆಗಿ ರಾಜಿನಾಮೆ ನೀಡಿದ್ದೇನೆ. ಎರಡು ತಿಂಗಳ ಹಿಂದೆಯೇ ಈ ಬಗ್ಗೆ ನಿರ್ಧಾರ ಮಾಡಿದ್ದೆ. ಯಾರ ಒತ್ತಡವೂ ಇರಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಯಾರು ಸಿಎಂ ಆಗಬೇಕೆಂದು ಯಾರ ಹೆಸರನ್ನೂ ಸೂಚಿಸುವುದಿಲ್ಲ. ಅದನ್ನು ಪಕ್ಷದ ನಾಯಕರು ಮಾಡಲಿದ್ದಾರೆ. ಪಕ್ಷದ ಕೆಲಸವನ್ನು ಮುಂದೆಯೂ ಮಾಡುತ್ತೇನೆ. ನನ್ನ ಪರವಾಗಿ ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ. ಹಾಗೆಯೇ ಮುಂದೆ ಬರುವ ಮುಖ್ಯಮಂತ್ರಿಗೂ ಸ್ವಾಮೀಜಿಗಳು ಬೆಂಬಲ ನೀಡುವಂತೆ ಕೋರುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಈ ಹಿಂದೆ ವಾಜಪೇಯಿ ಪ್ರಧಾನಿಯಾಗಿದ್ದಾಗ ಕೇಂದ್ರ ಸಚಿವನಾಗುವಂತೆ ಅವಕಾಶ ಕೊಟ್ಟಿದ್ದರು. ಆದರೆ, ನಾನು ಆಗಲೇ ಬೇಡ ಎಂದಿದ್ದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದಿದ್ದೆ. ಆನಂತರ ಆ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ನನಗೆ ಎಲ್ಲ ರೀತಿಯ ಸಹಕಾರ, ಸವಲತ್ತನ್ನು ಪಕ್ಷ ಕೊಟ್ಟಿದೆ. ಪಕ್ಷದ ಕೆಲಸವನ್ನು ಮಾಡುತ್ತೇನೆ ವಿನಾ ಯಾವುದೇ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ರಾಜಭನಕ್ಕೆ ನಡೆದುಕೊಂಡೇ ತೆರಳಿ ಯಡಿಯೂರಪ್ಪ ರಾಜಿನಾಮೆ ನೀಡಲಿದ್ದಾರೆಂದು ಹೇಳಲಾಗಿತ್ತು. ವಿಧಾನಸೌಧದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಊಟದ ಬಳಿಕ ಎಲ್ಲರೂ ಸೇರಿಕೊಂಡು ರಾಜಭವನಕ್ಕೆ ತೆರಳಿ ರಾಜಿನಾಮೆ ಪತ್ರ ನೀಡುವುದಾಗಿ ಹೇಳಿದ್ದರು. ಆದರೆ, ಕೊನೆಕ್ಷಣದಲ್ಲಿ ಕಾಲ್ನಡಿಗೆ ಯಾತ್ರೆ ರದ್ದುಪಡಿಸಿ ನೇರವಾಗಿ ವಾಹನದಲ್ಲಿ ತೆರಳಿ, ರಾಜಿನಾಮೆ ಕೊಟ್ಟು ಹಿಂದೆ ಬಂದಿದ್ದಾರೆ.
ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಶ್ರೀ @narendramodi, ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda, ಗೃಹ ಸಚಿವ ಶ್ರೀ @AmitShah ರವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ.
— B.S. Yediyurappa (@BSYBJP) July 26, 2021
Karnataka governor Thawar Chand Gehlot accepts CM BS Yediyurappa's resignation, asks him to continue as caretaker CM till the next CM takes oath.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm