ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 08:46 pm
Mangalore Correspondent
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm