ಬ್ರೇಕಿಂಗ್ ನ್ಯೂಸ್
29-07-21 04:58 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 29: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ ವಲಸಿಗರು ಈಗ ಆರ್‌ಎಸ್‌ಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೊಮ್ಮಾಯಿ ಸಂಪುಟದಲ್ಲಿ ಮೂವರನ್ನು ಹೊರತುಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್‌ಎಸ್‌ಎಸ್ ಬೈಠಕ್‌ನಲ್ಲಿ ನಿರ್ಣಯ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದ್ದು ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಘರ್ಷ ಏರ್ಪಡುವ ಸಾಧ್ಯತೆ ವ್ಯಕ್ತವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಶಾಸಕರು, ಸಚಿವರಾಗಿದ್ದವರ ಕಾರ್ಯವೈಖರಿ ಆರ್‌ಎಸ್‌ಎಸ್ ನಾಯಕರಿಗೆ ಸಮಾಧಾನ ತಂದಿಲ್ಲ. ಹೀಗಾಗಿ ಚಾಮರಾಜಪೇಟೆಯ ಕೇಶವ ಕೃಪಾದಲ್ಲಿ ನಡೆದ ಆರ್‌ಎಸ್‌ಎಸ್ ಬೈಠಕ್‌ನಲ್ಲಿ ವಲಸಿಗ ಶಾಸಕರ ಕುರಿತಾಗಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಅಧಿಕಾರವನ್ನು ಪಡೆದು ಎರಡು ವರ್ಷಗಳೇ ಕಳೆಯುತ್ತ ಬಂದರೂ ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಉಳಿದ ಯಾವುದೇ ವಲಸೆ ಶಾಸಕರು ಕೂಡ ಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾಗಿಲ್ಲ. ಅಲ್ಲದೇ ಅವರ ಕಾರ್ಯ ವೈಖರಿಯಿಂದ ಪಕ್ಷಕ್ಕೆ ಲಾಭವಾಗಿಲ್ಲ. ಹೀಗಾಗಿ ಈ ಮೂವರನ್ನು ಹೊರತುಪಡಿಸಿ ಉಳಿದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ನೀಡಬೇಡಿ. ಬದಲಾಗಿ ನಿಗಮ ಮಂಡಳಿ ಸ್ಥಾನವನ್ನು ನೀಡಿದರೆ ಸಾಕು ಎನ್ನುವ ಸೂಚನೆಯನ್ನು ನೀಡಲಾಗಿದೆ.
ಅಲ್ಲದೆ, ಸಚಿವ ಸಂಪುಟದಲ್ಲಿ ಬಿಜೆಪಿಯ ಹಿರಿಯ ಶಾಸಕರು ಅದರಲ್ಲೂ ಕಳೆದ ಬಾರಿ ಸಚಿವರಾಗಿದ್ದವರನ್ನು ಕೈಬಿಡುವಂತೆ ಸೂಚನೆ ನೀಡಲಾಗಿದೆ. ಹಿರಿಯರ ಪೈಕಿ ಆರ್.ಅಶೋಕ್, ಗೋವಿಂದ ಕಾರಜೋಳ, ಅಶ್ವಥ ನಾರಾಯಣ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅರವಿಂದ ಬೆಲ್ಲದ ಸೇರಿ ಕೆಲವು ಯುವ ಶಾಸಕರನ್ನು ಸಚಿವರಾಗಿ ಮಾಡಬೇಕು. ಉಳಿದವರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ.
ಅಲ್ಲದೆ, ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಕೆಲಸದ ಬಗೆಗೂ ರಿಪೋರ್ಟ್ ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಎಲ್ಲ ಶಾಸಕರನ್ನು ಜೊತೆಗೆ ಸೇರಿಸಿಕೊಂಡು ಭ್ರಷ್ಟಾಚಾರ ಇಲ್ಲದೆ ಸರಕಾರ ನಡೆಸಿಕೊಂಡು ಹೋದರೆ ಓಕೆ. ಇಲ್ಲದಿದ್ದರೆ ಮುಂದಿನ ಬಾರಿ ಬದಲಾಯಿಸಬೇಕಾದೀತು ಎಂದು ಆರೆಸ್ಸೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ. ಆರ್‌ಎಸ್‌ಎಸ್ ನಾಯಕರ ಯಡಿಯೂರಪ್ಪ ಸರಕಾರದ ಹಲವು ಸಚಿವರ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದು ಇದರ ಪರಿಣಾಮ ಹಲವು ಸಚಿವರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
As Basavarj Bommai took charge as the Chief Minister of Karnataka on Wednesday, Ministerial aspirants have begun lobbying to secure a berth in the new cabinet. Expanding the Ministry will be the first big challenge before the new Chief Minister as he will have to navigate through the cabinet formation exercise by maintaining balance between factions within the ruling BJP in the state.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm