ಬ್ರೇಕಿಂಗ್ ನ್ಯೂಸ್
03-08-21 01:08 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 03: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ, ಕೊರೊನಾ ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿಯೂ ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಹೀಗಾಗಿ ಕೆಲವು ಕೊರೊನಾ ನಿಯಮಗಳನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಕುರಿತು ಚರ್ಚೆಗಳು ನಡೆಯುತ್ತಿವೆ.
ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕೈಮೀರಿ ಹೋಗುವ ಮುನ್ನ ಕೊರೊನಾ ನಿಯಂತ್ರಣಕ್ಕೆ ಮತ್ತೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಹೇರುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.
ಮತ್ತೆ ರಾತ್ರಿ ಕರ್ಫ್ಯೂ ಜಾರಿಗೆ ತರುವಂತೆ ಸಲಹೆ;
ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿರುವುದರಿಂದ ಈಗಲೇ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಹೀಗಾಗಿ ಎಲ್ಲೆಡೆ ರಾತ್ರಿ ಕರ್ಫ್ಯೂ ಮತ್ತೆ ಜಾರಿಗೊಳಿಸಬೇಕು. ಪ್ರತಿ ದಿನ ಸಂಜೆ ಏಳರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಹೇರಿದರೆ ಸೂಕ್ತ ಎಂದು ಸಲಹೆ ನೀಡಲಾಗಿದೆ.
"ವಾರಾಂತ್ಯ ಕರ್ಫ್ಯೂ ಹೇರಿದರೂ ಉತ್ತಮ"
ರಾತ್ರಿ ಕರ್ಫ್ಯೂ ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಸದ್ಯ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವುದು ಕೂಡ ಸೂಕ್ತ ಎಂದು ತಂಡ ಸಲಹೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಳಿತವಾಗುತ್ತಿರುವುದರಿಂದ ಕಂಪನಿಗಳಲ್ಲಿ, ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸಂಖ್ಯೆಯನ್ನು ತಗ್ಗಿಸಬೇಕಿದೆ. ಕಚೇರಿಗಳಲ್ಲಿ ಶೇ. 50ರಷ್ಟು ಮಂದಿಗೆ ಮಾತ್ರ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕಿದೆ ಎಂದು ಹೇಳಿದೆ.
ಕೊರೊನಾ ಮೂರನೇ ಅಲೆ ಆತಂಕದ ಬೆನ್ನಲ್ಲೇ ಸಲಹಾ ಸಮಿತಿ ಸರ್ಕಾರದ ಎದುರು ಈ ಸಲಹೆಗಳನ್ನು ಇಟ್ಟಿದೆ. ಕರ್ನಾಟಕ ಒಳಗೊಂಡಂತೆ ಹತ್ತು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿರುವುದಾಗಿ ಕೇಂದ್ರ ಈತ್ತೀಚೆಗೆ ತಿಳಿಸಿತ್ತು. ಸೋಂಕಿನ ಪಾಸಿಟಿವಿಟಿ ದರವೂ ಹೆಚ್ಚಿರುವುದಾಗಿ ತಿಳಿಸಿತ್ತು. ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಠಿಣಗೊಳಿಸುವಂತೆ ತಿಳಿಸಿತ್ತು. ಹೆಚ್ಚು ಜನ ಸೇರದಂತೆ ತಡೆಯಲು ಹಾಗೂ 10%ಗೂ ಅಧಿಕ ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿತ್ತು.
ಇದರೊಂದಿಗೆ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್‌ಟಿಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಿದೆ. ಆರ್‌ಟಿಪಿಸಿಆರ್ ವರದಿ ಇಲ್ಲದವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ಹೇಳಿದೆ.
In a bid to contain the spread of coronavirus, Bruhat Bengaluru Mahanagara Palike (BBMP) has made institutional quarantine mandatory for those arriving here from outside Karnataka. "Those entering the city will have to bring a negative RT-PCR test report with them. If they don''t, we will conduct the test. Till the time their test report arrives, they will be under institutional quarantine," the Chief Commissioner of BBMP Gaurav Gupta told reporters yesterday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm