ಬ್ರೇಕಿಂಗ್ ನ್ಯೂಸ್
04-08-21 02:28 pm Headline Karnataka News Network ಕರ್ನಾಟಕ
ನೆಲಮಂಗಲ, ಆಗಸ್ಟ್ 4 : ಕಾಫಿ ಉದ್ಯಮದಲ್ಲಿ 1 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದರಿಂದ ಮನನೊಂದು ಯುವ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಕೀರ್ ಅಹ್ಮದ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ನೆಲಮಂಗಲ ನಗರದ ಕುಣಿಗಲ್ ವೃತ್ತದ ವಜ್ರೇಶ್ವರಿ ಲಾಡ್ಜ್ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.
ಜುಲೈ 13 ರಂದು ಶಕೀರ್ ಕಾಣೆಯಾಗಿರುವುದಾಗಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29 ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ರೂಂ ಪಡೆದು ಶಕೀರ್ ತಂಗಿದ್ದರು. ಪ್ರತಿದಿನ ಊಟ ಕೊಡಲು ರೂಂಗೆ ಹೋಗುತ್ತಿದ್ದ ಲಾಡ್ಜ್ ಸಿಬ್ಬಂದಿ, ನಿನ್ನೆ (ಸೋಮವಾರ) ಮಧ್ಯಾಹ್ನ ಹೋದಾಗ ಶಕೀರ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡ ಪರಿಶೀಲನೆ ನಡೆಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
Chikmagalur coffee estate owner commits suicide in Bangalore lodge due to huge loss. The Nelamangala police are now investigating the case.
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm