ಬ್ರೇಕಿಂಗ್ ನ್ಯೂಸ್
05-08-21 11:22 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರ ಮುಖ್ಯಸ್ಥ ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿ ಆಘಾತ ನೀಡಿದ್ದಾರೆ.
2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ.
ತಮ್ಮೊಂದಿಗೆ ವ್ಯವಹಾರ ನಡೆಸಿದ ರೋಷನ್ ಬೇಗ್ ಅವರ ಮಾತುಕತೆಯ ಆಡಿಯೋವನ್ನು ಖುದ್ದು ಮನ್ಸೂರ್ ಖಾನ್ ನಗರ ಪೊಲೀಸ್ ಆಯುಕ್ತರಿಗೆ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.
ಐಎಂಎ ಪ್ರಕರಣದಲ್ಲಿ ಬೇಗ್ ಹೆಸರು ಕೇಳಿ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರ್ಪಡೆಗೆ ಯತ್ನಿಸಿದ್ದರು. ಬಹುಕೋಟಿ ಐಎಂಎ ಹಗರಣದಲ್ಲಿ ಬೇಗ್ ಹೆಸರು ಕೇಳಿ ಬಂದಿದ್ದರಿಂದ ಜೊತೆಗೆ ಆರೆಸ್ಸೆಸ್ ವಿರೋಧ ವ್ಯಕ್ತಪಡಿಸಿದ್ದರಿಂದ ಬೇಗ್ ಅಮಾನತುಗೊಂಡ ಶಾಸಕರೇ ಉಳಿದುಕೊಂಡರು. ಕಳೆದ ಉಪ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿದ್ದರು. ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಉತ್ಸುಕತೆ ತೋರಿ, ಕೊನೆಗೆ ಚುನಾವಣಾ ಕಣದಿಂದ ದೂರ ಸರಿದಿದ್ದರು.
''ರೋಷನ್ ಬೇಗ್ ಅವರು ಈ ಐಎಂಎ ಸಂಸ್ಥೆಯಿಂದ 400 ಕೋಟಿ ರೂ. ಪಡೆದುಕೊಂಡಿದ್ದಾರೆ'' ಎಂದು ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಬಂಧನಕ್ಕೂ ಮುನ್ನ ಹೊರ ಹಾಕಿದ್ದ ಸರಣಿ ವಿಡಿಯೋದಲ್ಲಿ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಆಡಿಯೋದಲ್ಲಿ ಶಿವಾಜಿನಗರದ ಎಂಎಲ್‍ಎ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿಗಳಷ್ಟು ಹಣ ನೀಡಿದ್ದು ಹಣ ವಾಪಾಸ್ ನೀಡಲು ಕೇಳಿದಾಗ ಲೋಕಲ್ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದರು. ನನಗೆ ರಕ್ಷಣೆ ಸಿಗದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ನಂತರ 22/06/2019 ರಂದು ದುಬೈನಲ್ಲಿದ್ದೇನೆ ಎಂದು ವಿಡಿಯೋ ರೆಕಾರ್ಡ್ ಮಾಡಿದ್ದ. ಆ ವಿಡಿಯೋದಲ್ಲಿ ಆಡಿಯೋದಲ್ಲಿ ನೀಡಿದ್ದ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು, ಮತ್ತೊಮ್ಮೆ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿ ನೀಡಿದ್ದೇನೆ ಎಂದಿದ್ದ.
'ನಾನು ಶಾಸಕನಲ್ಲದಿದ್ದರೂ ನಾನು ಹಜ್ ಸಮಿತಿ ಅಧ್ಯಕ್ಷನಾಗಿದ್ದೇನೆ. ನಾನು ಪ್ರತಿದಿನ ಯಾತ್ರಾರ್ಥಿಗಳ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಿದೆ' ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ, ಸರಿಯಾದ ಮಾಹಿತಿಯಿಲ್ಲದ ಕಾರಣ ನಾನು ಪುಣೆಗೆ ತೆರಳುವಾಗ ನನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು ಎಂದು ರೋಷನ್ ಬೇಗ್ ಈ ಹಿಂದೆ ವಿಚಾರಣೆ ಎದುರಿಸಿದ್ದಾಗ ಪ್ರತಿಕ್ರಿಯಿಸಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಐಎಂಎ ಹಗರಣ ಬೆಳಕಿಗೆ ಬಂದಿತ್ತು. ಆಗ ಸರ್ಕಾರ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.ಮೊದಲಿಗೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ನಂತರ ಬಿಟಿಎಂ ಲೇ ಔಟ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ವಂಚನೆ ಪ್ರಕರಣದ ದೂರು ದಾಖಲಾಯಿತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಯಿತು.
A 13-member team of Central Bureau of Investigation (CBI) officials from New Delhi on Monday morning raided former minister Roshan Baig’s residence and his son’s office in connection with the multi-crore
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm