ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm