ಬ್ರೇಕಿಂಗ್ ನ್ಯೂಸ್
08-08-21 11:51 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 8 : ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಕ್ಕದ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಿಂದ ಕೇರಳಕ್ಕೆ ತೆರಳುವ ಎಲ್ಲಾ ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 16ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ.
ಕರ್ನಾಟಕ ಸರ್ಕಾರ ಮಹಾರಾಷ್ಟ್ರ, ಕೇರಳದ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳ ಸೂಚನೆಯಂತೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಚೆಕ್ ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಸಿ ಕೊರೊನಾ ನಿಯಂತ್ರಿಸಲು ಬಿಗಿಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಕೇರಳ ರಾಜ್ಯದಲ್ಲಿ 3ನೇ ಅಲೆ ಕಂಡುಬಂದಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇರಳದಿಂದ ಆಗಮಿಸುವವರನ್ನು ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಬಾರದು. ತುರ್ತು ಕೆಲಸ ಇದ್ದವರಿಗೆ 72 ಗಂಟೆಗಳ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿರುವ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದ್ದರು.
ಕೊಡಗು ಜಿಲ್ಲೆಗೆ ಸರಕು ಸಾಗಣಿಕೆ ವಾಹನದಲ್ಲಿ ಪ್ರವೇಶಿಸುವವರು 7 ದಿನಕ್ಕೊಮ್ಮೆ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ನೀಡಬೇಕು. ಜೊತೆಗೆ ಆಂಟಿಜೆನ್ ಪರೀಕ್ಷೆ ಮಾಡಿ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು. ಕೊಡಗು ಜಿಲ್ಲೆಯಲ್ಲಿ ಶನಿವಾರ 71 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
Kodagu Banned Government and Private Bus to Kerala.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm