ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್‌ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm