ಬ್ರೇಕಿಂಗ್ ನ್ಯೂಸ್
23-08-21 11:52 am Headline Karnataka News Network ಕರ್ನಾಟಕ
ಬಾಗಲಕೋಟೆ, ಆಗಸ್ಟ್ 23: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ನಡುವೆ ತಾಲಿಬಾನ್ ಬೆಂಬಲಿಸಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಫೇಸ್ಬುಕ್ನಲ್ಲಿ ಐ ಲವ್ ತಾಲಿಬಾನ್ ಎಂದು ಪೋಸ್ಟ್ ಮಾಡಿದ್ದ ಆರೋಪಿ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಬಂಧಿಸಲಾಗಿದೆ.
ಈತ ತನ್ನ ಫೇಸ್‍ಬುಕ್ ಪೋಸ್ಟ್ನಲ್ಲಿ ಐ ಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವಧರ್ಮಿಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ದೇಶದ್ರೋಹದ ಕೃತ್ಯ ಖಂಡಿಸಿ ಆತನನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪೋಸ್ಟ್ ವೈರಲ್ ಆದ ಬಳಿಕ ಆಸೀಫ್ ಗಲಗಲಿ ನಾಪತ್ತೆಯಾಗಿದ್ದ, ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆ ಸಂಬಂಧ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಸ್ಸಾಂನಲ್ಲಿ 14 ಮಂದಿಯ ಬಂಧನ;
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಮರಳಿ ಅಧಿಕಾರವನ್ನು ಪಡೆದಿರುವುದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಅಸ್ಸಾಂನ 11 ಜಿಲ್ಲೆಗಳಿಂದ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ 11 ಜಿಲ್ಲೆಗಳಿಂದ 14 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ತೇಝ್ ಪುರ್ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಯೂ ಸೇರಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿರುವುದಕ್ಕೆ ಕೆಲವರು ನೇರವಾಗಿ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಭಾರತವನ್ನು ಟೀಕಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಾಧ್ಯಮಗಳು ತಾಲಿಬಾನ್ ಅನ್ನು ಬೆಂಬಲಿಸುವುದಿಲ್ಲ. ಇದರ ಪರಿಣಾಮ ಕೋಮು ಘರ್ಷಣೆ ನಡೆಯಲು ಕಾರಣವಾಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಸಾಮಾಜಿಕ ಜಾಲತಾಣದ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದ ಅಸ್ಸಾಂ ಪೊಲೀಸ್ ಸೈಬರ್ ಸೆಲ್ ತಂಡ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದೆ. ತಾಲಿಬಾನ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತಂದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ವೈಯೊಲೆಟ್ ಬರುವಾ ತಿಳಿಸಿದ್ದಾರೆ.
I love Taliban post on facebook Bagalkot youth arrested by police. The arrest was made after massive opposition from Hindu organisations.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm