ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.
ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.
ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm