ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್‌ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್‌ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm