ಬ್ರೇಕಿಂಗ್ ನ್ಯೂಸ್
29-08-21 01:06 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಮೂರು ದಿನಗಳಿಂದ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ಆಗಾಗ ತುಂತುರು ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ.
ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಲಕ್ಷದ್ವೀಪ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯ ಜೊತೆ ಜೋರಾಗಿ ಗಾಳಿ ಸಹ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಯಾವ-ಯಾವ ಜಿಲ್ಲೆಯಲ್ಲಿ ಮಳೆ;
ಭಾರತೀಯ ಹವಾಮಾನ ಇಲಾಖೆ ಆಗಸ್ಟ್ 30ರ ಸೋಮವಾರದ ತನಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಗಸ್ಟ್ 31ರಂದು ಸಹ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
With rainfall activity expected to pick up in Central and Western India, the India Meteorological Department(IMD) has predicted heavy to very heavy rainfall for Telangana and Karnataka on Sunday. The weather department has issued an orange alert for nine districts of Karnataka.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm