ಬ್ರೇಕಿಂಗ್ ನ್ಯೂಸ್
02-09-21 04:16 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.2: ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ದೌರ್ಜನ್ಯ ಎಸಗಿ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಲ್ಲಿ ಪಿಎಸ್ಐ ಅರ್ಜುನ್ ಸಿಐಡಿ ಅಧಿಕಾರಿಗಳ ಬಂಧನಕ್ಕೀಡಾಗಿದ್ದು ಆತನಿಗೆ ಚಿಕ್ಕಮಗಳೂರು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ವಿವಾಹಿತ ಮಹಿಳೆಯೊಬ್ಬರಿಗೆ ಫೋನ್ ಮಾಡಿದ್ದ ಆರೋಪದಲ್ಲಿ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಕೆ.ಎಲ್.ಪುನೀತ್ ಎಂಬಾತನನ್ನು ವಿಚಾರಣೆಗಾಗಿ ಪಿಎಸ್ಐ ಅರ್ಜುನ್ ಒಯ್ದಿದ್ದರು. ಪೊಲೀಸರು ಆತನಿಗೆ ಥಳಿಸಿ ಚಿತ್ರಹಿಂಸೆ ನೀಡಿದ್ದಲ್ಲದೆ, ನೀರು ಕೇಳಿದ್ದಕ್ಕೆ ಮತ್ತೊಬ್ಬ ಆರೋಪಿಯಲ್ಲಿ ಮೂತ್ರ ಮಾಡಿಸಿ, ಕೆಳಗೆ ಬಿದ್ದಿದ್ದ ಮೂತ್ರವನ್ನು ಬಲವಂತವಾಗಿ ಕುಡಿಸಿ ದೌರ್ಜನ್ಯ ಎಸಗಿದ್ದರು ಎಂದು ಪುನೀತ್ ಆರೋಪಿಸಿದ್ದರು. ಈ ಬಗ್ಗೆ ಕೇಸು ದಾಖಲಾಗಿದ್ದರಿಂದ ರಾಜ್ಯ ಸರಕಾರ ಪಿಎಸ್‌ಐ ಅರ್ಜುನ್ ಅವರನ್ನು ಸೇವೆಯಿಂದ ಹತ್ತು ದಿನಗಳ ಕಾಲ ಅಮಾನತು ಮಾಡಿದ್ದಲ್ಲದೆ, ಆನಂತರ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.


ಪ್ರಕರಣದ ಬಗ್ಗೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ, ಪಿಎಸ್‌ಐ ಅರ್ಜುನ್ ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದವು.
ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಪಿಎಸ್ಐ ಅರ್ಜುನ್ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ, ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ ಪೊಲೀಸರು ನಿನ್ನೆ ರಾತ್ರಿ ಆರೋಪಿ ಅರ್ಜುನನ್ನು ಬಂಧಿಸಿದ್ದರು. ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The 1st District and Satra court in Chikmagalur has imposed 14 days judicial custody of PSI Arjun for allegedly urinating on a youth of Dalit community. A complaint has been lodged against PSI Arjun for allegedly urinating on a young man from a Dalit community in Chikkamagalur district. The CID police yesterday arrested PSI Arjun in Bangalore in connection with the case.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am