ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.
ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm