ಬ್ರೇಕಿಂಗ್ ನ್ಯೂಸ್
05-09-21 09:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತಿನ ಅನುಮತಿ ನೀಡಲಾಗಿದೆ. ಆದರೆ ಗಣೇಶನ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ʼಗರಿಷ್ಠ ಐದು ದಿನಗಳ ವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಬಹುದು ಎಂದರು.
ಮಹಾನಗರಗಳಲ್ಲಿ ಪ್ರತಿ ವಾರ್ಡ್‌ಗೆ ಒಂದು ಸ್ಥಳದಲ್ಲಿ ಮಾತ್ರ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ದೊರೆಯಲಿದೆ. ಪೊಲೀಸರು ಕಾರ್ಯಕ್ರಮ ಸಂಘಟಕರ ಜತೆ ಚರ್ಚಿಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಡಿಜೆ ಮತ್ತು ಕಾರ್ಯಕ್ರಮಕ್ಕೆ ಧ್ವನಿವರ್ಧಕ ಬಳಕೆಗೆ ಅನುಮತಿ ಇರುವುದಿಲ್ಲ. ಗಣೇಶ ವಿಗ್ರಹಗಳ ವಿಸರ್ಜನೆಗೆ ಮೆರವಣಿಗೆ ನಡೆಸುವಂತಿಲ್ಲ. ನಿಗದಿತ ಸಂಖ್ಯೆಯ ಜನರು ಮಾತ್ರ ಗಣೇಶ ವಿಗ್ರಹ ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಶಾಲೆ, ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ತಿಳಿಸಿದರು. ಪೆಂಡಾಲ್‌ನಲ್ಲಿ 20 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ವಿವರಿಸಿದರು.
ಉತ್ಸವದಲ್ಲಿ ಪಾಲ್ಗೊಳ್ಳಲು ಲಸಿಕೆ ಕಡ್ಡಾಯ
ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವವರು ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ಕಾರ್ಯಕ್ರಮ ಸಂಘಟಕರು ಕೋವಿಡ್ ಪರೀಕ್ಷೆಯನ್ನೂ ಮಾಡಿಸಿರಬೇಕು ಎಂದು ಸಚಿವ ಅಶೋಕ್ ಹೇಳಿದರು. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆಯಾದರೆ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
The Karnataka government on Sunday allowed partial celebration of the upcoming ganesh utsav in the state, with Covid-19 norms and conditions in place. While no immersion or visarjan of the idol will be allowed post 9pm, pandals have been given an okay.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm