ಬ್ರೇಕಿಂಗ್ ನ್ಯೂಸ್
07-09-21 11:45 am Headline Karnataka News Network ಕರ್ನಾಟಕ
ಮೈಸೂರು, ಸೆ.7 : ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಯಾರು ನಾಯಕ ಸ್ಥಾನದಲ್ಲಿ ಇರುತ್ತಾರೋ ಅವರ ಮುಂದಾಳತ್ವದಲ್ಲಿ ಎಲ್ಲ ನಡೆದುಕೊಂಡು ಹೋಗುತ್ತೆ. ಈಗ ಬೊಮ್ಮಾಯಿ ಸಿಎಂ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅದರ ಚರ್ಚೆ ಈಗ ಬೇಡ ಎನ್ನುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಷಾ, ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುವ ಮೂಲಕ ನಾಯಕ ಮಣಿಗಳ ತಲೆಗೆ ಹುಳ ಬಿಟ್ಟಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಜಾರಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಎನ್‌ಇಪಿ ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ. ಈ ನೀತಿ ಸಂಪೂರ್ಣ ಅನುಷ್ಠಾನಕ್ಕೆ 15 ವರ್ಷ ಕಾಲಾವಕಾಶ ಇದೆ. ಈ ಬಗ್ಗೆ ಏಳೆಂಟು ವರ್ಷದಿಂದಲೇ ಚರ್ಚೆಯಲ್ಲಿದೆ. ಹಾಗಾಗಿ ಮತ್ತೆ ಅಭಿಪ್ರಾಯ ಸಂಗ್ರಹ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಠಿ ಮಾಡ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿ ಸಾಧ್ಯ ಇದೆ. ಕಾಂಗ್ರೆಸ್ ಗೆ ಯಾವುದೇ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿಯೇ ಅವರು ಅನಗತ್ಯ ಹೊಂದಲ ಸೃಷ್ಠಿ ಮಾಡಿ ವಿರೋಧ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಆಫ್ಗನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರವನ್ನು ವಿದೇಶಾಂಗ ಇಲಾಖೆ, ಅದರ ಸಚಿವರು ನೋಡಿಕೊಳ್ತಾರೆ. ವೀಸಾ ಅವಧಿ ಮುಗಿದವರು ಅರ್ಜಿ ಹಾಕಿಕೊಳ್ಳಲಿ. ಅದನ್ನು ವಿದೇಶಾಂಗ ಇಲಾಖೆಯವರು ಪರಿಶೀಲನೆ ಮಾಡ್ತಾರೆ. ನಾವು ಯಾರಿಗೂ ತಿಂಗಳ ಅವಧಿಗೆ ವೀಸಾ ಕೊಡೋದಿಲ್ಲ. ಶೈಕ್ಷಣಿಕ ಅವಧಿಗೆ ಅಂತ ವೀಸಾ ಪಡೆದುಕೊಂಡಿರುತ್ತಾರೆ. ಇದರಲ್ಲಿ ನಾವು ತಲೆ ತೂರಿಸುವ ಪ್ರಮೇಯ ಇಲ್ಲ ಎಂದು ಹೇಳಿದರು.
The party will decide on the next election DCM Dr Ashwaththa Narayana.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm