ಬ್ರೇಕಿಂಗ್ ನ್ಯೂಸ್
08-09-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೊರೋನ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತೀರ್ಮಾನಿಸಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೋನ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm