ಬ್ರೇಕಿಂಗ್ ನ್ಯೂಸ್
12-09-21 10:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಸೆ 12 : ಜೀಪ್ - ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್‌ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್‌ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣದಲ್ಲಿ ಜೀಪ್ ಚಾಲಕ ರಮೇಶ್ (40), ಮುನಿರತ್ನಮ್ಮ (55), ನಾರಾಯಣಸ್ವಾಮಿ (55) ಸೇರಿದಂತೆ 8 ಜನರ ಸಾವು ಸಂಭವಿಸಿದೆ. ನಿಖಿಲ್, ವೆಂಕಟಲಕ್ಷ್ಮೀ, ಯಶೋಧಮ್ಮ, ಸತ್ಯಪ್ಪ, ಮುನಿಸ್ವಾಮಿ, ಮಂಜುನಾಥ, ಅಂಬರೀಶ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Eight people die on spot after Truck Jeep accident at Chikkaballapur.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm