ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್‍ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್‍ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.
ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm