ಬ್ರೇಕಿಂಗ್ ನ್ಯೂಸ್
20-09-21 11:35 am Headline Karnataka News Network ಕರ್ನಾಟಕ
ದಾವಣಗೆರೆ, ಸೆ. 20; ನಿಜಕ್ಕೂ ವಿಧಿ ಎಂತಾ ಘೋರ. ಇನ್ನು ಬದುಕಿ ಬಾಳಬೇಕಿದ್ದ 8 ವರ್ಷದ ಬಾಲಕನ ಕಥೆ ಮುಗಿದಿದೆ. ಆತನ ಜೊತೆಗೆ ತಂದೆ ತಾಯಿಯೂ ಸಾವಿನಲ್ಲಿ ಜೊತೆಯಾಗಿದ್ದಾರೆ. ಇಂಥದ್ದೊಂದು ಹೃದಯವಿದ್ರಾವಕ ಘಟನೆಗೆ ಬೆಣ್ಣೆನಗರಿ ದಾವಣಗೆರೆ ಸಾಕ್ಷಿಯಾಗಿದೆ.
ಅದು ಪುಟ್ಟ ಕುಟುಂಬ. ಗಂಡ, ಹೆಂಡತಿ, ಮಗು ವಾಸವಾಗಿದ್ದರು. ಆರ್ಥಿಕವಾಗಿ ಮೇಲ್ನೋಟಕ್ಕೆ ಚೆನ್ನಾಗಿದ್ದರು ಎಂದುಕೊಂಡರೂ ಸಾವಿಗೆ ಇನ್ನು ಸ್ಪಷ್ಟ ಕಾರಣ ಸಿಕ್ಕಿಲ್ಲ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರಿಂದಲೇ ಸಾವಿಗೆ ಶರಣಾಗಿರಬಹುದು ಎಂಬುದು ಪ್ರಾಥಮಿಕವಾಗಿ ಸಿಕ್ಕಿರುವ ಮಾಹಿತಿ.
ಅಂದ ಹಾಗೆ ಈ ಹೃದಯವಿದ್ರಾವಕ ಘಟನೆ ನಡೆದಿರುವುದು ದಾವಣಗೆರೆ ಭಾರತ್ ಕಾಲೋನಿಯ ಶೇಖರಪ್ಪ 'ಬಿ' ಬ್ಲಾಕ್ ನಲ್ಲಿ. ಕೃಷ್ಣಾನಾಯ್ಕ್ ಕುಟುಂಬದ ಮೂವರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
48 ವರ್ಷದ ಕೃಷ್ಣಾನಾಯ್ಕ್, 35 ವರ್ಷದ ಆತನ ಪತ್ನಿ ಸರಸ್ವತಿ ಬಾಯಿ, 8 ವರ್ಷದ ಮಗು ಧ್ರುವ ಮೃತಪಟ್ಟವರು ಎಂದು ತಿಳಿದು ಬಂದಿದೆ. ಭಾರತ್ ಕಾಲೋನಿ ಶೇಖರಪ್ಪ 'ಬಿ' ಬ್ಲಾಕನಲ್ಲಿ ವಾಸವಾಗಿದ್ದ ಕೃಷ್ಣನಾಯ್ಕ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರೆ, ಕೃಷ್ಣಾನಾಯ್ಕ್‌ರಿಗೆ ಸಹ ಆರೋಗ್ಯ ಸಮಸ್ಯೆ ಇತ್ತು. ಕೃಷ್ಣನಾಯ್ಕ್ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದರು. ಆರೋಗ್ಯದಲ್ಲಿ ಉಂಟಾಗುತ್ತಿದ್ದ ಏರುಪೇರಿನಿಂದಾಗಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಬೇಸತ್ತಿದ್ದ ದಂಪತಿ ಆಸ್ಪತ್ರೆಗೆ ತೋರಿಸಿದ್ದರೂ ಸಂಪೂರ್ಣ ಗುಣಮುಖರಾಗಿರಲಿಲ್ಲ ಎನ್ನಲಾಗಿದೆ. ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಓದುತ್ತಿದ್ದ ಧ್ರುವ ಎಂಬ ಬಾಲಕ ಮೃತಪಟ್ಟಿದ್ದು, ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕೃಷ್ಣಾನಾಯ್ಕ್ ಶವ ಪತ್ತೆಯಾಗಿದ್ದರೆ, ಸರಸ್ವತಿ ಬಾಯಿ ಹಾಗೂ ಮಗು ಧ್ರುವ ಮಲಗಿದ ಸ್ಥಿತಿಯಲ್ಲೇ ಪತ್ತೆಯಾಗಿದ್ದಾರೆ.
ಮನೆ ಕಡೆ ಆರ್ಥಿಕವಾಗಿ ಚೆನ್ನಾಗಿದ್ದರೂ ಆರೋಗ್ಯ ಕೈಕೊಟ್ಟ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರ್. ಎಂ. ಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ. ಏನು ಅರಿಯದ ಎಂಟು ವರ್ಷದ ಕಂದಮ್ಮನೂ ಬಲಿಯಾಗಿದ್ದು ವಿಪರ್ಯಾಸವೇ ಸರಿ.
Davanagere eight-year-old boy including his parents commits suicide at home due to health issues. It is said both parents were depressed by health issues and that's the reason they have taken this extreme step.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm