ಬ್ರೇಕಿಂಗ್ ನ್ಯೂಸ್
27-09-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.27: ಆರೆಸ್ಸೆಸ್‌ನಲ್ಲಿ ಯಾರು ಕೂಡ ದೇಶಭಕ್ತರೇ ಇಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸತ್ತವರೂ ಇಲ್ಲ. ಇವರು ಕೂಡ ತಾಲಿಬಾನಿಗಳಂತೆ ಕೈಯಲ್ಲಿ ದೊಣ್ಣೆ ಹಿಡಿದೇ ಬರುತ್ತಾರೆ, ಹುಷಾರಾಗಿರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಮಾಜಿ ಸಿಎಂ ಆರ್. ಗುಂಡೂರಾವ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯಿಂದ ದೂರ ಉಳಿದವರೆಲ್ಲ ಈಗ ಗೀತೆ ಹೇಳಲು ಆರಂಭಿಸಿದ್ದಾರೆ ಎಂದು ಕುಟುಕಿದ್ದಾರೆ.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುವ ಬಿಜೆಪಿ ಪಕ್ಷವು ಇಸ್ಲಾಂ, ಕ್ರಿಸ್ತಿಯನ್ ಸಮುದಾಯದ ಒಬ್ಬರಿಗೂ ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಿಲ್ಲ. ಗಾಂಧಿ, ಅಂಬೇಡ್ಕರ್, ಪಟೇಲ್ ಅವರನ್ನು ದ್ವೇಷಿಸುತ್ತಿದ್ದ ಬಿಜೆಪಿಗೆ ಇದ್ದಕ್ಕಿದ್ದಂತೆ ಅವರ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಿ ರಾಜ್ಯ ಬಿಜೆಪಿ ಸರಕಾರವು ಬಡವರ ಅನ್ನಕ್ಕೆ ಕಲ್ಲು ಹಾಕಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳನ್ನು ಉತ್ಪಾದಿಸಿ ಮಾರಾಟ ಮಾಡುತ್ತಾರೆ. ದಲಿತ, ಬಡವರ ಪರ ಗುಂಡೂ ರಾವ್ ಅವರಿಗಿದ್ದ ಕಾಳಜಿ ಎಲ್ಲರಿಗೂ ಮಾದರಿ. ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ ತಲಾ 10 ಸಾವಿರ ರೂಪಾಯಿ ಗುಂಡೂರಾವ್ ಫೌಂಡೇಷನ್ ನೀಡುತ್ತಿದೆ. ಈ ವರ್ಷದಲ್ಲೇ 30 ಸಾವಿರ ಆಹಾರ ಕಿಟ್ ಹಂಚಿದ್ದಾರೆ ಎಂದು ಶ್ಲಾಘಿಸಿದರು. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ನೀಡುತ್ತೇವೆ ಎಂದರು.
ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು 'ಮಾಡಿದ್ದುಣ್ಣೋ ಮಹರಾಯ' ಎಂದು. ಆರ್.ಎಸ್.ಎಸ್ ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ ಎಂದು ಸವಾಲೆಸೆದರು.
ಇನ್ನು ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವಂತೆ ನಾಟಕವಾಡಲು ಆರಂಭಿಸಿದ್ದಾರೆ. ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬಾ ಬಟ್ಟೆ ಮತ್ತು ಹೊಟ್ಟೆ ತುಂಬ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ. ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದರು.
Senior Congress leader Siddaramaiah on Sunday alleged that BJP are “Talibanis” and also claimed that it’s actually the RSS which is running the administration in Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm