ಬ್ರೇಕಿಂಗ್ ನ್ಯೂಸ್
29-09-21 03:31 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ. 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್‌ಡೌನ್‌ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು.
No Fee Hike for Engineering says Minister Ashwath Narayan.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm