ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್‌ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.
ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.
ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್‌ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್‌ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm