ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್‍ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್‍ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್‍ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್‍ಮೆಂಟ್‍ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್‍ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್‍ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್‍ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am