ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm