ಬ್ರೇಕಿಂಗ್ ನ್ಯೂಸ್
13-10-21 09:28 pm Bengaluru Correspondent ಕರ್ನಾಟಕ
ಬೆಂಗಳೂರು, ಅ.13: ತಮ್ಮದೇ ಪಕ್ಷದ ಅಧ್ಯಕ್ಷರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ವಿರುದ್ಧ ಕೆಪಿಸಿಸಿ ಕಡೆಯಿಂದ ಶೋಕಾಸ್ ನೋಟೀಸ್ ನೀಡಲಾಗಿದೆ. ಮಂಗಳವಾರ ಸಂಜೆ ಮಾಧ್ಯಮಗೋಷ್ಠಿ ಕರೆದಿದ್ದ ವಿ.ಎಸ್. ಉಗ್ರಪ್ಪ, ಮಾತು ಆರಂಭಿಸುವ ಮೊದಲು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಜೊತೆಗೆ ಗುಟ್ಟಾಗಿ ಮಾತನಾಡಿದ್ದರು. ಆದರೆ ಅದು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿ, ಪ್ರಸಾರವಾಗಿ ದೊಡ್ಡ ರಾದ್ಧಾಂತಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಡುಕರಂತೆ ಮಾತನಾಡುತ್ತಾರೆ. ಡಿಕೆಶಿ ಕಲೆಕ್ಷನ್ ಗಿರಾಕಿ, ಅವನ ಹುಡುಗರ ಹತ್ತಿರವೇ ಐವತ್ತರಿಂದ ನೂರು ಕೋಟಿ ರೂ. ಇದೆ ಅಂದ್ರೆ ಡಿಕೆಶಿ ಹತ್ರ ಎಷ್ಟು ದುಡ್ಡಿರಬಹುದು ಎಂದು ಇಬ್ಬರೂ ನಾಯಕರು ಮಾತನಾಡಿಕೊಂಡಿದ್ದರು. ಅದು ಬುಧವಾರ ಬೆಳಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಜೊತೆಗೆ ಡಿ.ಕೆ. ಶಿವಕುಮಾರ್ ಕುರಿತು ವಿ.ಎಸ್. ಉಗ್ರಪ್ಪ ಹಾಗೂ ಎಂ.ಎ. ಸಲೀಂ ಮಾತನಾಡಿದ್ದ ವಿಚಾರಗಳು ವಿರೋಧ ಪಕ್ಷಗಳ ಲೇವಡಿಗೆ ಗುರಿಯಾಗಿವೆ.
ಉಗ್ರಪ್ಪಗೆ ಶೋಕಾಸ್ ನೋಟೀಸ್ ಕೊಟ್ಟ ಕಾಂಗ್ರೆಸ್!
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ಮಾಡುವಂತೆಯೂ ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಅವರಿಗೆ ಸಂಕಷ್ಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘನತೆಗೆ ಕುಂದು ತರುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟೀಸ್ ಜಾರಿಯಾಗಿದೆ. ಅಶಿಸ್ತಿನ ನಡುವಳಿಕೆಗಾಗಿ ಕಾರಣ ಕೇಳಿ ನೋಟೀಸನ್ನು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಜಾರಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ತಾವು ದಿ. 13.10.2021ರಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಅವರೊಂದಿಗೆ ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಘನತೆ ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗುವ ವಿವರಗಳನ್ನು ಮಾತನಾಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಮಾತನಾಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಅದನ್ನು ಸಂಪೂರ್ಣವಾಗಿ ನಿರಾಕರಿಸಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡುವಳಿಕೆಯ ಬಗ್ಗೆ ತಕ್ಷಣ ಸಮಜಾಯಿಸಿಯನ್ನು ಮೂರು ದಿನಗಳೊಳಗೆ ಕೊಡಬೇಕು ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಸೂಚಿಸಿದ್ದಾರೆ.
ಕೆಪಿಸಿಸಿ ಪ್ರಾಥಮಿಕ ಸದಸ್ಯತ್ವದಿಂದ ವಜಾ!
ಇದೇ ವೇಳೆ, ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ವರೆಗೆ ವಜಾಗೊಳಿಸಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಆದೇಶ ಮಾಡಿದ್ದಾರೆ. ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರೊಂದಿಗೆ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ನಡೆಸಿದ್ದ ಖಾಸಗಿ ಮಾತುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅವರ ಬೇಜವಾಬ್ದಾರಿ ನಡುವಳಿಕೆಯಿಂದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ತುರ್ತು ಸಭೆಯಲ್ಲಿ ಸಲೀಂ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆರು ವರ್ಷಗಳಿಗೆ ಉಚ್ಚಾಟಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ತಿಳಿಸಿದ್ದಾರೆ.
ಸುಮೊಟೊ ಕೇಸ್ ದಾಖಲಿಸಿ ತನಿಖೆಗೆ ಡಿಕೆಶಿ ಒತ್ತಾಯ
ಕಾಂಗ್ರೆಸ್ ನಾಯಕರಾದ ವಿಎಸ್ ಉಗ್ರಪ್ಪ ಹಾಗೂ ಎಂ.ಎ. ಸಲೀಂ ಅವರು ತಮ್ಮ ಮೇಲೆ ಮಾಡಿದ್ದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸಂಭಾಷಣೆಗೂ (ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ನಡುವೆ), ನನಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ನಾನು ಯಾವುದೇ ಪರ್ಸೆಂಟೇಜ್ ವಿಚಾರದಲ್ಲೂ ಭಾಗಿಯಾಗಿಲ್ಲ. ಅದರ ಅಗತ್ಯವೂ ನನಗಿಲ್ಲ. ಗೃಹ ಸಚಿವರು ಯಾರಾದರೂ ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅವರು ಸುಮೊಟೋ ಕೇಸ್ ದಾಖಲಿಸಿದರೂ ಒಳ್ಳೆಯದೇ ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪಗೆ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ.
D K Shivakumar to scam Congress Ugrappa served show cause notice. In what will cause major embarrassment to the Congress party, two party leaders from Karnataka were caught on camera discussing alleged bribes taken by the state unit president D.K. Shivakumar, describing him as a ‘collection agent’.Former Lok Sabha member V.S. Ugrappa and the state unit’s media coordinator M.A. Salim were to address a press conference. While waiting for the conference to start, they began conversing, apparently unaware that the mics were hot.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am