ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am