ಬ್ರೇಕಿಂಗ್ ನ್ಯೂಸ್
28-10-21 04:14 pm H K News Desk ಕರ್ನಾಟಕ
ಕಾರವಾರ, ಅ.28: ಕುಮಟಾ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಪತ್ತೆಯಾದ ವಸ್ತು ಬಾಂಬ್ ಅಲ್ಲ. ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಕಾರವಾರ ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಬದಿಯ ಗುಡ್ಡದಲ್ಲಿ ಬಾಂಬ್ ರೀತಿಯ ವಸ್ತು ನಿನ್ನೆ ಸಂಜೆ ಪತ್ತೆಯಾಗಿತ್ತು. ವಿದ್ಯುತ್ ವೈರ್ ಗಳನ್ನು ಜೋಡಿಸಿ ಡಿಟೋನೇಟರ್ ರೀತಿಯ ಬಾಂಬ್ ಅಳವಡಿಸಲಾಗಿದೆ ಎಂದು ಸ್ಥಳೀಯರು ಆತಂಕ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರ ಪೊಲೀಸರು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿತ್ತು. ತಜ್ಞರು ಬಂದು ಪರಿಶೀಲಿಸಿದ್ದು ಅದರಲ್ಲಿ ಬಾಂಬ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಐಇಡಿ ಬಾಂಬ್ ಮಾದರಿಯಲ್ಲಿ ಜೋಡಿಸಿ ಇಡಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಇರಲಿಲ್ಲ. ಘಟನೆ ಸಂಬಂಧ ಸ್ಫೋಟಕ ಕಾಯ್ದೆ 4 ಮತ್ತು 5ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೇವರಾಜು ತಿಳಿಸಿದ್ದಾರೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಬಾಂಬ್ ರೀತಿಯ ವಸ್ತು ಪತ್ತೆಯಾದ ಸ್ಥಳದ ಸಮೀಪದಲ್ಲೇ ಕುಮಟಾ ರೈಲ್ವೇ ನಿಲ್ದಾಣ ಇತ್ತು. ಹೀಗಾಗಿ ಯಾರೋ ಉದ್ದೇಶಪೂರ್ವಕ ಬಾಂಬ್ ಇಟ್ಟಿದ್ದಾರೆಂದು ಸಂಶಯಪಡಲಾಗಿತ್ತು. ಸಂಜೆಯೇ ಪೊಲೀಸರನ್ನು ನಿಯೋಜಿಸಿ, ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು. ಇದರಿಂದಾಗಿ ಕುಮಟಾದಲ್ಲಿ ಭಯದ ವಾತಾವರಣ ಉಂಟಾಗಿತ್ತು. ಸ್ಥಳೀಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳೇ ಕಿಡಿಗೇಡಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಮಟಾದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆ ! ಸ್ಥಳೀಯರಲ್ಲಿ ಆತಂಕ, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ರವಾನೆ
A suspected improvised explosive device (IED) was been found in a wooded area near the Kumta Railway station on Wednesday evening, creating panic among the locals is said to be dummy.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am