ಬ್ರೇಕಿಂಗ್ ನ್ಯೂಸ್
30-10-21 03:57 pm Headline Karnataka News Network ಕರ್ನಾಟಕ
ಬೆಂಗಳೂರು, ಅ.30 : ಕರುನಾಡನ್ನು ಬಿಟ್ಟು ಅಗಲಿರುವ ಸ್ಟಾರ್ ನಟ ಪುನೀತ್ ರಾಜಕುಮಾರ್ ಅಂತ್ಯಸಂಸ್ಕಾರವನ್ನು ನಾಳೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಈಗಾಗ್ಲೇ ಕಂಠೀರವ ಸ್ಟುಡಿಯೋದಲ್ಲಿ ತಂದೆ ರಾಜಕುಮಾರ್ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದೇ ಹೇಳಲಾಗಿತ್ತು. ಆದರೆ, ಅಮೆರಿಕದಲ್ಲಿರುವ ಪುನೀತ್ ಪುತ್ರಿ ಧೃತಿ ಬೆಂಗಳೂರಿಗೆ ಆಗಮಿಸುವುದು ಸಂಜೆಯಾಗಲಿರುವುದರಿಂದ ರಾತ್ರಿ ವೇಳೆಗೆ ಅಂತ್ಯಕ್ರಿಯೆ ನಡೆಸುವುದು ಬೇಡವೆಂದು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ ನಾಳೆಯೇ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಬೊಮ್ಮಾಯಿ ನಿರ್ಧರಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗಿದ್ದು ದಕ್ಷಿಣ ಭಾರತದ ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಿನ್ನೆ ಸಂಜೆಯಿಂದ ನಿರಂತರವಾಗಿ ಅಂತಿಮ ದರ್ಶನ ನಡೆಯುತ್ತಿದ್ದು, ಲಕ್ಷಾಂತರ ಅಭಿಮಾನಿಗಳು ಬಂದು ತಮ್ಮ ನೆಚ್ಚಿನ ನಟನನ್ನು ಕೊನೆಯ ಬಾರಿಗೆ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಉತ್ತರ ಕರ್ನಾಟಕ ಸೇರಿ ರಾಜ್ಯದಾದ್ಯಂತದಿಂದ ಅಭಿಮಾನಿಗಳು ಬರುತ್ತಿದ್ದು, ಕಂಠೀರವ ಕ್ರೀಡಾಂಗಣಜದಲ್ಲಿ ಜನಸಾಗರವೇ ಸೇರಿದೆ.
ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ರಾಜ್ಯ ಸರಕಾರದ ಸಚಿವರೆಲ್ಲ ಕಂಠೀರವ ಕ್ರೀಡಾಂಗಣದಲ್ಲಿದ್ದಾರೆ. ವಿವಿಧ ರಂಗದ ಗಣ್ಯರು ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕೂಡ ಆಗಮಿಸಿದ್ದು, ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ, ಅಂತಿಮ ದರ್ಶನ ಪಡೆದು ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದರು.
ಅಂತಿಮ ಯಾತ್ರೆಗೆ ಮಾರ್ಗ ನಿಗದಿ
ಅಂತ್ಯಕ್ರಿಯೆಗೂ ಮುನ್ನ ಕಂಠೀರವ ಕ್ರೀಡಾಂಗಣದಿಂದ ಯಶವಂತಪುರದ ಕಂಠೀರವ ಸ್ಟುಡಿಯೋದತ್ತ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಲಿದೆ. ಇದಕ್ಕಾಗಿ ಪೊಲೀಸರು ಬಿಗಿ ಭದ್ರತೆಯನ್ನೂ ಏರ್ಪಡಿಸಿದ್ದಾರೆ. ಕಾರ್ಪೊರೇಶನ್ ವೃತ್ತ, ಬಸವೇಶ್ವರ ವೃತ್ತ, ವಿಂಡ್ಸರ್ ಮ್ಯಾನರ್, ಸ್ಯಾಂಕಿ ಕೆರೆ, ಮಾರಮ್ಮ ದೇವಸ್ಥಾನ ಸರ್ಕಲ್, ಯಶವಂತಪುರ, ಗೊರಗುಂಟೆಪಾಳ್ಯದ ಮೂಲದ ಮೆರವಣಿಗೆ ಸಾಗಲಿದೆ. ಹೀಗಾಗಿ ಸದ್ಯ ಈ ರೂಟಿನಲ್ಲಿ ಪೂರ್ತಿಯಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕೆಎಸ್ ಆರ್ ಪಿ ಸೇರಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ಬಳಸಿಕೊಳ್ಳಲಾಗಿದೆ.
Kannada star Puneeth Rajkumars last rites will be performed on Sunday at Sree Kanteerava Stadium on Sunday, Karnataka chief minister Basavaraj Bommai said on Saturday. The last rites were expected to be performed on Saturday for which the Bengaluru authorities imposed strict security measures in the city. However, the last rites could not be performed on Saturday and Puneeth Rajkumar's daughter, who stays in the United States, has only reached Delhi and will arrive in Bengaluru by 7pm. "As per our tradition, we don't perform funeral after sunset. His last rites will be performed at Sree Kanteerava Stadium in Bengaluru tomorrow," the chief minister said.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm