ಬ್ರೇಕಿಂಗ್ ನ್ಯೂಸ್
30-10-21 10:24 pm Headline Karnataka News Desk ಕರ್ನಾಟಕ
ಧಾರವಾಡ, ಅ.30: ಮೋಸ ಮತ್ತು ತಂತ್ರಗಾರಿಕೆಯಿಂದ ಒಂದು ವರ್ಗದ ಜನರ ಸಂಖ್ಯೆಯನ್ನು ಹೆಚ್ಚಿಸುವುದನ್ನು ಒಪ್ಪಲಾಗದು. ಬಲವಂತ ಮತ್ತು ಮೋಸದ ಮತಾಂತರ ಕಾರ್ಯವನ್ನು ನಿಯಂತ್ರಿಸುವುದಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆರೆಸ್ಸೆಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ಧಾರವಾಡದಲ್ಲಿ ಆರೆಸ್ಸೆಸ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಹಿನ್ನೆಲೆಯಲ್ಲಿ ದತ್ತಾತ್ರೇಯ ಹೊಸಬಾಳೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ವೇಳೆ, ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧ ಪಕ್ಷಗಳು ಮತಾಂತರ ವಿರೋಧಿ ಕಾಯ್ದೆ ಬಗ್ಗೆ ಯಾಕೆ ವಿರೋಧ ವ್ಯಕ್ತಪಡಿಸುತ್ತಿವೆ ಎನ್ನುವುದು ಅರ್ಥವಾಗಲ್ಲ. ಕಾಂಗ್ರೆಸ್ ಆಡಳಿತದಲ್ಲಿರುವ ಹಿಮಾಚಲ ಪ್ರದೇಶ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಮತಾಂತರ ವಿರೋಧಿ ಕಾಯ್ದೆ ಜಾರಿಗೆ ತರಲಾಗಿದೆ. ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಕಾಯ್ದೆ ತಂದಿದ್ದಾರೆ ಅನ್ನುವುದನ್ನು ಗಮನಿಸಬೇಕು. ಅದಕ್ಕಾಗಿ ರಾಜ್ಯದಲ್ಲಿಯೂ ಬಲವಂತದ ಮತಾಂತರ ವಿರುದ್ಧ ಕಾಯ್ದೆ ತರುವುದಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದರು.
ಮತಾಂತರ ಕಾರ್ಯ ನಿಲ್ಲಬೇಕು. ಈಗಾಗಲೇ ಯಾರು ಮತಾಂತರಗೊಂಡಿದ್ದಾರೆ, ಅವರು ತಾವು ಮತಾಂತರ ಆಗಿರುವುದನ್ನು ಘೋಷಿಸಿಕೊಳ್ಳಬೇಕು. ಅಲ್ಲದೆ, ಎರಡೆರಡು ಕಡೆ ಸರಕಾರದ ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ನಿಲ್ಲಿಸಬೇಕು. ಮತಾಂತರ ಕಾಯ್ದೆ ಜಾರಿಗೆ ತರುವುದಿದ್ದರೆ ಅದನ್ನು ಸ್ವಾಗತಿಸಬೇಕು ಎಂದು ಹೊಸಬಾಳೆ ಹೇಳಿದರು. ಜನಸಂಖ್ಯೆ ನಿಯಂತ್ರಣಕ್ಕಾಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಸೂಕ್ತ ನೀತಿ ಜಾರಿಗೆ ತರಬೇಕು. ಆ ನಿಮಯ ದೇಶದ ಎಲ್ಲ ಜನರಿಗೂ ಸಮಾನವಾಗಿ ಅನ್ವಯವಾಗಬೇಕು. ಮತ್ತು ಆಯಾ ದೇಶದ ಸಂಪನ್ಮೂಲ ಆಧರಿಸಿ ಈ ನೀತಿಯನ್ನು ರೂಪಿಸಬೇಕು ಎಂದು ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಹೆಸರಿನಲ್ಲಿ ದೇಶಾದ್ಯಂತ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಆಯಾ ಭಾಗದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನೇಪಥ್ಯಕ್ಕೆ ಸರಿದ ಸ್ವಾತಂತ್ರ್ಯ ಹೋರಾಟಗಾರರಾದ ರಾಣಿ ಅಬ್ಬಕ್ಕ, ವೇಲು ನಚಿಯಾರ್, ರಾಣಿ ಗಾಯ್ದಿನಿಲು ಹೀಗೆ ಹಲವರ ತ್ಯಾಗ, ಬಲಿದಾನಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ ಏರ್ಪಡಿಸಲಾಗುವುದು. ಭಾರತದ ಸ್ವಾತಂತ್ರ್ಯ ಚಳವಳಿ ಅನ್ನುವುದು ಅತ್ಯಂತ ವಿಶಿಷ್ಟವಾದ್ದು. ಅತ್ಯಂತ ಸುದೀರ್ಘ ಅವಧಿಗೆ ನಡೆದ ಸ್ವಾತಂತ್ರ್ಯ ಚಳವಳಿ ದೇಶದ ಜನರ ಐಕ್ಯತೆಯನ್ನು ಬಡಿದೆಬ್ಬಿಸಿತ್ತು. ಈ ಚಳವಳಿ ಕೇವಲ ಬ್ರಿಟಿಷರ ವಿರುದ್ಧ ಮಾತ್ರ ಆಗಿರಲಿಲ್ಲ. ಸ್ವದೇಶಿ ಜಾಗೃತಿಯನ್ನು ಮೂಡಿಸಿದ ಚಳವಳಿಯಾಗಿತ್ತು. ದೇಶದ ಅಸ್ಮಿತೆಯನ್ನು ಜಾಗೃತಿಗೊಳಿಸಲು ಸ್ವಾಮಿ ವಿವೇಕಾನಂದರ ರೀತಿಯ ಮಹಾನುಭಾವರು ಶ್ರಮಿಸಿದ್ದಾರೆ. ದೇಶದ ಇತಿಹಾಸ, ಪರಂಪರೆ ತಿಳಿದುಕೊಂಡು ಈಗಿನ ಯುವಜನತೆ ಭಾರತವನ್ನು ಇಡೀ ವಿಶ್ವದಲ್ಲಿ ಅದ್ವಿತೀಯ ಆಗಿಸುವುದಕ್ಕೆ ಪಣ ತೊಡಬೇಕು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದರು.

ದೀಪಾವಳಿಗೆ ಪಟಾಕಿ ನಿಷೇಧಿಸಿದರೆ ಸಾಕೇ ?
ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಕೆಲವರ ಒತ್ತಾಯದ ಬಗ್ಗೆ ಕೇಳಿದ ಪ್ರಶ್ನೆಗೆ, ದೀಪಾವಳಿಗೆ ಪಟಾಕಿ ನಿಷೇಧಿಸಿದ ಮಾತ್ರಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಆಗುತ್ತದೆ ಅನ್ನುವುದು ಸೋಜಿಗದ ಪ್ರಶ್ನೆ. ದೀಪಾವಳಿಗೆ ಪಟಾಕಿ ನಿಷೇಧಿಸಿದರೆ ಪರಿಸರ ಮಾಲಿನ್ಯ ಸಮಸ್ಯೆ ಮುಗಿದು ಹೋಗಲ್ಲ. ಪರಿಸರ ಮಾಲಿನ್ಯ ನಿಯಂತ್ರಿಸುವುದು, ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವುದು ದಿನನಿತ್ಯದ ಕೆಲಸ ಆಗಬೇಕು. ಜಗತ್ತಿನ ಹಲವು ದೇಶಗಳಲ್ಲಿ ಪಟಾಕಿಗಳನ್ನು ಉರಿಸುತ್ತಾರೆ. ಆದರೆ ಯಾವ ರೀತಿಯ ಪಟಾಕಿಗಳನ್ನು ನಿಷೇಧಿಸಬೇಕು ಅನ್ನುವುದು ಚಿಂತಿಸಬೇಕಾದ ವಿಚಾರ ಎಂದು ಹೇಳಿದರು.
ಈ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಪಟಾಕಿ ತಯಾರಿ ಮತ್ತು ಮಾರುಕಟ್ಟೆ ಕ್ಷೇತ್ರದಲ್ಲಿ ತೊಡಗಿಸಿರುವ ಉದ್ಯೋಗಿಗಳ ಬಗ್ಗೆಯೂ ನೋಡಬೇಕಾಗುತ್ತದೆ. ಯಾವ ಪಟಾಕಿಯನ್ನು ನಿಷೇಧಿಸಬೇಕು ಎಂಬ ಬಗ್ಗೆ ರಾಷ್ಟ್ರೀಯ ನೆಲೆಯಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಬೇಕು ಎಂದು ಹೊಸಬಾಳೆ ಸಲಹೆ ಮಾಡಿದರು.
Rashtriya Swayamsevak Sangh general secretary Dattatreya Hosabale alleged that minority communities in the country opposed anti-conversion laws and that religious conversion by fraudulent methods is unacceptable.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm