ಬ್ರೇಕಿಂಗ್ ನ್ಯೂಸ್
08-11-21 09:45 am Bengaluru Correspondent ಕರ್ನಾಟಕ
ಬೆಂಗಳೂರು, ನ 08: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 8 ಮತ್ತು 9ರಂದು ಗುಡುಗು, ಸಿಡಿಲಿನ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಗೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯೂ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಮುಂಜಾನೆಯೇ ಜಿಟಿ-ಜಿಟಿ ಮಳೆಯಾಗುತ್ತಿದೆ.
ಭಾನುವಾರ ಬೆಳ್ತಂಗಡಿಯಲ್ಲಿ 10 ಸೆಂ. ಮೀ. ಮಳೆಯಾಗಿದೆ. ಸುಳ್ಯ 7, ಪುತ್ತೂರು 5, ಮಂಗಳೂರು 2, ಕುಂದಾಪುರ 2 ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ಎರಡು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಡಕೆ ಮತ್ತು ಭತ್ತದ ಬೆಳೆಗೆ ಹಾನಿಯಾಗುವ ಆತಂಕ ಎದುರಾಗಿದೆ.
ಯಾವ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್:
ನವೆಂಬರ್ 8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ:
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಆರ್ಭಟ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಸಂಕಷ್ಟಕ್ಕೆ ಸಿಲುಕಿದ ರೈತರು:
ಜೂನ್‌ನಿಂದ ಸೆಪ್ಟೆಂಬರ್ ತನಕ ನೈಋತ್ಯ ಮುಂಗಾರು ಅವಧಿಯಾಗಿದೆ. ಜೂನ್‌ನಲ್ಲಿ ಮಳೆ ಆರಂಭವಾದರೂ ಜುಲೈನಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ ಮಳೆ ಕಡಿಮೆಯಾಗಿತ್ತು. ಸೆಪ್ಟೆಂಬರ್‌ನಲ್ಲಿ ಮುಂಗಾರು, ವಿವಿಧ ಚಂಡಮಾರುತದ ಪರಿಣಾಮ ವಾಡಿಕೆಗಿಂತ ಹೆಚ್ಚು ಮಳೆಯಾಗಿತ್ತು. ಅಕ್ಟೋಬರ್‌ನಲ್ಲಿಯೂ ಮಳೆ ಹೆಚ್ಚಾಗಿ ರೈತರು ಬೆಳೆದ ತರಕಾರಿ ಬೆಳೆಗಳಿಗೆ ಹಾನಿಯಾಗಿ ಬೆಲೆಗಳು ಏರಿಕೆಯಾಗಿತ್ತು. ನವೆಂಬರ್‌ನಲ್ಲಿಯೂ ಚಂಡಮಾರುತದ ಪರಿಣಾಮ ಮಳೆಯಾಗುತ್ತಲೇ ಇದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೂವು, ತರಕಾರಿ, ಸೊಪ್ಪು, ಅಡಕೆ, ಭತ್ತ ಸೇರಿದಂತೆ ವಿವಿಧ ಬೆಳಗಳಿಗೆ ಹಾನಿಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಕೆ ಬೆಳೆಗಾರರು ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ.
Bengaluru is expected to see moderate to heavy rain with thunderstorms from Friday, November 5, to 8.30 am on Saturday, and further widespread light to moderate with isolated heavy rains until Monday. Meanwhile, coastal districts including Dakshina Kannada, Udupi and Uttara Kannada will witness widespread thunderstorms.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm