ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am