ಬ್ರೇಕಿಂಗ್ ನ್ಯೂಸ್
16-11-21 12:40 pm HK News Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ವಿಚಾರ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷರು ಮೌನವಾಗಿರುವುದನ್ನು ನೋಡಿದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮಾಸ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಹಗರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೆಸರು ಕೇಳಿಬರುತ್ತಿದ್ದರೂ ಈ ಬಗ್ಗೆ ಯಾರು ಕೂಡ ಸ್ಪಷ್ಟನೆ ನೀಡಿಲ್ಲ. ಸ್ವತಃ ರಾಜ್ಯ ಬಿಜೆಪಿ ಅಧ್ಯಕ್ಷರು ಕೂಡ ಯಾವುದೇ ಮಾತನ್ನು ಆಡಿಲ್ಲ. ಇದೇ ವಿಚಾರದಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು. ಇಲ್ಲದಿದ್ದರೆ ಅವರ ನಿಗೂಢ ಮೌನದ ಬಗ್ಗೆ ಜನರು ತಪ್ಪು ತಿಳಿಯಬಹುದು ಎಂದು ಟೀಕಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ಹಗರಣದ ಬಗ್ಗೆ ಭಾರೀ ಗುಲ್ಲು ಎಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿ ಕಾರ್ಯಕರ್ತ ಸಚಿನ್ ಮಾಮನಿ ಎಂಬವರು ಪ್ರಧಾನಿಗೆ ಬರೆದಿರುವ ಪತ್ರವನ್ನು ಆಧರಿಸಿ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಹೆಸರನ್ನು ಪ್ರಮುಖವಾಗಿ ಎತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಗೆ 70 ಕೋಟಿ ನೀಡಲಾಗಿದೆ ಎನ್ನುವ ವಿಚಾರವನ್ನು ಹೇಳಿಕೊಂಡಿದ್ದರು. ಈ ರೀತಿಯ ಆರೋಪ ಕೇಳಿಬಂದಿದ್ದರೂ, ಬಿಜೆಪಿ ನಾಯಕರು ಆ ಬಗ್ಗೆ ಹಾರಿಕೆಯ ಉತ್ತರ ನೀಡಿದ್ದು ಬಿಟ್ಟರೆ ಯಾವುದೇ ಖಚಿತ ಮಾಹಿತಿಗಳನ್ನು ಬಿಟ್ಟುಕೊಟ್ಟಿಲ್ಲ.
ಇದೇ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ, ಬಿಜೆಪಿ ಅಧ್ಯಕ್ಷರ ಹೆಸರೆತ್ತಿ ನಿಗೂಢ ಮೌನದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಬಿಟ್ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 15, 2021
ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ 'ನಿಗೂಢ ಮೌನ'ದ ಬಗ್ಗೆ ಜನರು ತಪ್ಪು ತಿಳಿಯಬಹುದು.
BJP Bitcoin scam Priyank Kharge questions the silence of BJP President Nalin Kateel. Now, in another exclusive, one of his main partners in crime, Robin Khandelwal's account of his escapades with Sriki, will be detailed in this story. Furthermore, while going through the charge sheet, we also found how the Nalapad brothers are associated with Sriki.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm