ಬ್ರೇಕಿಂಗ್ ನ್ಯೂಸ್
12-09-20 11:03 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 12: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಕೊರೊನಾ ವಾರಿಯರ್ ಉದ್ಘಾಟಿಸಲಿದ್ದಾರೆ. ಅ.17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಮುಹೂರ್ತದಲ್ಲಿ ದಸರಾ ಉತ್ಸವ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ.
ಈ ಬಾರಿ ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಈ ಕುರಿತು ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ಇಂದು ನಡೆಯಿತು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಅಕ್ಟೋಬರ್ 2 ರಂದು ಮಧ್ಯಾಹ್ನ ದಸರಾ ಗಜಪಡೆಯನ್ನು ಮೈಸೂರು ಅರಮನೆ ಆವರಣಕ್ಕೆ ಸ್ವಾಗತಿಸಲಾಗುವುದು. ಪ್ರತಿ ವರ್ಷದಂತೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಈ ಸಲ ಇರುವುದಿಲ್ಲ. ಈ ಬಾರಿ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆ ಆಗಮನವಾಗಲಿದೆ.
ವಿಶೇಷ ಅಂದ್ರೆ ಈ ಬಾರಿ ಕೊರೊನಾ ವಾರಿಯರ್ಸ್ ಸೇರಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿದ್ದಾರೆ. ಐವರು ಕೊರೊನಾ ವಾರಿಯರ್ಸ್ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಕೂಡ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಬಾರಿ ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಯಲಿದ್ದು ಈ ಬಾರಿಯ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ.

ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
ಇನ್ನು ನವರಾತ್ರಿಯ ಎಲ್ಲ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm